ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ಶಾಸಕ ಬಿ.ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದಿದೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರೂ ಆಗಿದ್ದ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆಯಲಾಗಿದೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಮಂಜುಳಾ ಅವರ ಪಾತ್ರ ಇದೆ ಎಂಬ ಶಂಕೆಯ ಮೇಲೆ ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.