Home ಕ್ರೀಡೆ ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಂತ ನಿಧಾನವಾಗಿ ಈ ಸಾಧನೆ ಮಾಡಿದ ವಿರಾಟ್ ಕೊಹ್ಲಿ!

ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಂತ ನಿಧಾನವಾಗಿ ಈ ಸಾಧನೆ ಮಾಡಿದ ವಿರಾಟ್ ಕೊಹ್ಲಿ!

by Editor
0 comments
virat kohli

ಭಾರತದ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ಭಾರತದ ನಾಲ್ಕನೇ ಬ್ಯಾಟ್ಸ್ ಮನ್ ಎಂಬ ಗೌರವಕ್ಕೆ ಪಾತ್ರರಾದರೂ ಈ ಸಾಧನೆ ಅತ್ಯಂತ ನಿಧಾನಗತಿಯಲ್ಲಿ ಮಾಡಿದ ದಾಖಲೆಗೆ ಪಾತ್ರರಾದರು.

ನ್ಯೂಜಿಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಸೊನ್ನೆಗೆ ಔಟಾಗಿದ್ದ ವಿರಾಟ್ ಕೊಹ್ಲಿ ಎರಡನೇ ಇನಿಂಗ್ಸ್ ನಲ್ಲಿ ಭರ್ಜರಿ ಅರ್ಧಶತಕ ದಾಖಲಿಸಿದರೂ ಇನಿಂಗ್ಸ್ ನ ಕೊನೆಯ ಎಸೆತದಲ್ಲಿ ಔಟಾಗಿ ಶತಕ ಗಳಿಸುವ ಅವಕಾಶದಿಂದ ವಂಚಿತರಾದರು.

ಟೆಸ್ಟ್ ಕ್ರಿಕೆಟ್ ನಲ್ಲಿ ರನ್ ಗಳಿಸಲು ಪರದಾಡುತ್ತಿದ್ದ ವಿರಾಟ್ ಕೊಹ್ಲಿ ಮೊದಲ 18 ರನ್ ಗಳಿಸಲು ಪರದಾಡಿದರು. ಆದರೆ ನಂತರ ಲಯ ಕಂಡುಕೊಳ್ಳುತ್ತಲೇ ತಮ್ಮ ಎಂದಿನ ಸಹಜ ಆಟದಿಂದ ಗಮನ ಸೆಳೆದರು. ಅಲ್ಲದೇ  102 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 70 ರನ್ ಗಳಿಸಿದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದರು.

ವಿರಾಟ್ ಕೊಹ್ಲಿ 9000 ರನ್ ಪೂರೈಸಿದ 4ನೇ ಬ್ಯಾಟ್ಸ್ ಮನ್ ಎನಿಸಿಕೊಂಡರು. ಕೊಹ್ಲಿ ಈ ಸಾಧನೆ ಮಾಡಲು 116 ಟೆಸ್ಟ್ ಗಳಲ್ಲಿ 197 ಇನಿಂಗ್ಸ್ ತೆಗೆದುಕೊಂಡಿದ್ದಾರೆ. 48.74ರ ಸರಾಸರಿಯಲ್ಲಿ ಅತ್ಯಂತ ನಿಧಾನವಾಗಿ ಈ ಸಾಧನೆ ಮಾಡಿದರು.

banner

ಸಚಿನ್ ತೆಂಡೂಲ್ಕರ್ 200 ಪಂದ್ಯ 329 ಇನಿಂಗ್ಸ್ ಗಳಲ್ಲಿ 53.78ರ ಸರಾಸರಿಯಲ್ಲಿ 15,921 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದರೆ, ರಾಹುಲ್ ದ್ರಾವಿಡ್ 163 ಪಂದ್ಯ 284 ಇನಿಂಗ್ಸ್ ಗಳಲ್ಲಿ 52.63ರ ಸರಾಸರಿಯಲ್ಲಿ 13,265 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಸುನೀಲ್ ಗವಾಸ್ಕರ್ 125 ಟೆಸ್ಟ್ ಗಳಲ್ಲಿ 284 ಇನಿಂಗ್ಸ್ ಗಳಲ್ಲಿ 51.12ರ ಸರಾಸರಿಯಲ್ಲಿ 10,122 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.

ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತ್ಯಂತ ವೇಗವಾಗಿ 27,000 ರನ್ ಪೂರೈಸಿದ ದಾಖಲೆ ಬರೆದಿದ್ದರು. ಅದರ ಬೆನ್ನಲ್ಲೇ ಮೊದಲ ಇನಿಂಗ್ಸ್ ನಲ್ಲಿ ಶೂನ್ಯಕ್ಕೆ ಔಟಾಗಿ ಅತ್ಯಧಿಕ ಬಾರಿ (38) ಶೂನ್ಯಕ್ಕೆ ಔಟಾದ ದಾಖಲೆಯನ್ನೂ ಬರೆದಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ UP Accident ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗೆ 5 ವೈದ್ಯರು! ಐಪಿಎಲ್‌ ಹರಾಜಿನಲ್ಲಿ ಸೇಲಾದ 13 ಕನ್ನಡಿಗರು: ಮಯಾಂಕ್ ಕಡೆಗಣನೆ! Goutam Gambhir ಮೊದಲ ಟೆಸ್ಟ್ ಗೆದ್ದ ಬೆನ್ನಲ್ಲೇ ಭಾರತಕ್ಕೆ ಮರಳಿದ ಗಂಭೀರ್! Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ