ರಾಜ್ಯದ ಮೂರು ವಿಧಾನಸಭೆಗಳಿಗೆ ಬುಧವಾರ ನಡೆದ ಉಪ ಚುನಾವಣೆಯಲ್ಲಿ ಮತದಾರರು ಹುರುಪಿನಿಂದ ಮತದಾನ ಮಾಡುತ್ತಿದ್ದು, ಮೂರೂ ಕ್ಷೇತ್ರಗಳಲ್ಲಿ ಶೇ.75ಕ್ಕಿಂತಲೂ ಅಧಿಕ ಮತದಾನ ದಾಖಲಾಗಿದೆ.
ಬುಧಾರ ಸಂಜೆ ೫ ಗಂಟೆಗೆ ಚುನಾವಣಾಧಿಕಾರಿಗಳು ನೀಡಿದ ಮಾಹಿತಿ ಪ್ರಕಾರ ಶಿಗ್ಗಾವಿಯಲ್ಲಿ ಶೇ. 75.07, ಸಂಡೂರಿನಲ್ಲಿ ಶೇ. 75.49 ಮತ್ತು ಚನ್ನಪಟ್ಟಣದಲ್ಲಿ ಶೇ.84 ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದರೂ ಮಧ್ಯಾಹ್ನ 11 ಗಂಟೆಯಿಂದ ಮತದಾರರು ಮತಗಟ್ಟೆಯಿಂದ ಹೊರಗೆ ಬಂದು ಹೆಚ್ಚು ಮತ ಚಲಾಯಿಸುತ್ತಿದ್ದಾರೆ.
ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದರೆ, ಕಾಂಗ್ರೆಸ್ ನಿಂದ ಯಾಸಿರ್ ಅಹ್ಮದ್ ಪಠಾಣ್ ಸ್ಪರ್ಧೆ ನೀಡಲಿದ್ದಾರೆ.
ಸಂಡೂರಿನಲ್ಲಿ ಇ.ತುಕಾರಾಂ ಪತ್ನಿ ಈ.ಅನ್ನಪೂರ್ಣ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರೆ, ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಬಂಗಾರು ಹನುಮಂತು ಕಣಕ್ಕಿಳಿದಿದ್ದಾರೆ.
ಭಾರೀ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವರಾಗಿರುವ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಸಿಪಿ ಯೋಗೇಶ್ವರ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಯೋಗೇಶ್ವರ್ ಮತ್ತು ಸತತ ಎರಡು ಚುನಾವಣೆಯಲ್ಲೂ ಸೋಲುಂಡಿರುವ ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದಾರೆ.