Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಶೇ.50 ಪಾಲು ಕೇಳುತ್ತಿದ್ದ ಮೋದಿ ರಾಜ್ಯಕ್ಕೆ ಶೇ.15ರಷ್ಟು ಕೊಡುತ್ತಿಲ್ಲ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 35 ವೀಕ್ಷಣೆಗಳು

ರಾಜ್ಯಕ್ಕೆ ಕಳೆದ 5 ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ನೀತಿ ಆಯೋಗದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು.  ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713 ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ ಶೇ.1.66 ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದರು.

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ.50ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಆದರೆ ರಾಜ್ಯಕ್ಕೆ ಶೇ.15ರಷ್ಟು ಕೂಡ ಪಾಲು ಕೊಡುತ್ತಿಲ್ಲ. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment