Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ವನಿತೆಯರ ಟಿ-20 ವಿಶ್ವಕಪ್: ಆಸ್ಟ್ರೇಲಿಯಾಗೆ ಮಣಿದ ಭಾರತದ ಸೆಮೀಸ್ ಹಾದಿ ಕಠಿಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
hamranpreet
hamranpreet

ನಾಯಕಿ ಹರ್ಮನ್ ಪ್ರೀತ್ ಕೌರ್ ಹೋರಾಟದ ಅರ್ಧಶತಕದ ಹೊರತಾಗಿಯೂ ಭಾರತ ತಂಡ 9 ರನ್ ಗಳಿಂದ ಆಸ್ಟ್ರೇಲಿಯಾ ವಿರುದ್ಧ ಸೋಲುಂಡು ವನಿತೆಯರ ಟಿ-20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಹಾದಿ ದುರ್ಗಮವಾಗಿದೆ.

ಶಾರ್ಜಾದಲ್ಲಿ ಭಾನುವಾರ ನಡೆದ ಎ ಗುಂಪಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 151 ರನ್ ಕಲೆ ಹಾಕಿತು. ಕಠಿಣ ಗುರಿ ಬೆಂಬತ್ತಿದ ಭಾರತ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್ ಗಳಿಸಲಷ್ಟೇ ಶಕ್ತವಾಯಿತು.

ಭಾರತ ಗೆಲ್ಲಲು ಕೊನೆಯ ಓವರ್ ನಲ್ಲಿ 14 ರನ್ ಗಳಿಸಬೇಕಿತ್ತು. ಆದರೆ 4 ವಿಕೆಟ್ ಕಳೆದುಕೊಂಡು 2 ರನ್ ಮಾತ್ರ ಗಳಿಸುವ ಮೂಲಕ ಗೆಲುವಿನ ಹೊಸ್ತಿಲಲ್ಲಿ ಎಡವಿತು. ಅದರಲ್ಲೂ ಕೊನೆಯ 6 ಬ್ಯಾಟ್ಸ್ ಮನ್ ಗಳು ಒಂದಂಕಿಯ ಮೊತ್ತಕ್ಕೆ ಔಟಾದರು.

ಭಾರತ ತಂಡ ಸೆಮಿಫೈನಲ್ ತಲುಪಬೇಕಾದರೆ ಈ ಪಂದ್ಯದಲ್ಲಿ ಗೆಲ್ಲಲೇಬೇಕಿತ್ತು. ಸೋತು ಟೂರ್ನಿಯಿಂದ ಹೊರಬಿದ್ದರೆ ಆಸ್ಟ್ರೇಲಿಯಾ ನಾಕೌಟ್ ಹಂತ ಪ್ರವೇಶಿಸಿತು.  ನಾಯಕಿ ಹರ್ಮನ್ ಪ್ರೀತ್ ಕೌರ್ 47 ಎಸೆತಗಳಲ್ಲಿ 6 ಬೌಂಡರಿ ಸೇರಿದಂತೆ 54 ರನ್ ಬಾರಿಸಿ ಅಜೇಯರಾಗಿ ಉಳಿದರು.

ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದ ಪರ ಆರಂಭಿಕ ಆಟಗಾರ್ತಿ ಗ್ರೇಸ್ ಹ್ಯಾರಿಸ್ (40), ನಾಯಕಿ ಟಾಹಿಲಾ ಮೆಗ್ರಾಥ್ (32) ಮತ್ತು ಎಸ್ಲೆ ಪೆರ್ರಿ (32) ತಂಡವನ್ನು ಉತ್ತಮ ಮೊತ್ತದತ್ತ ಮುನ್ನಡೆಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment