Thursday, September 19, 2024
Google search engine
Homeತಾಜಾ ಸುದ್ದಿಕುಸ್ತಿಪಟು ಭಜರಂಗ್ ಪೂನಿಯಾ, ವಿನೇಶ್ ಪೊಗಟ್ ಕಾಂಗ್ರೆಸ್ ಸೇರ್ಪಡೆ

ಕುಸ್ತಿಪಟು ಭಜರಂಗ್ ಪೂನಿಯಾ, ವಿನೇಶ್ ಪೊಗಟ್ ಕಾಂಗ್ರೆಸ್ ಸೇರ್ಪಡೆ

ಭಾರತದ ಖ್ಯಾತ ಕುಸ್ತಿಪಟುಗಳಾದ ಭಜರಂಗ್ ಪೂನಿಯಾ ಮತ್ತು ವಿನೇಶ್ ಪೊಗಟ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಮ್ಮುಖದಲ್ಲಿ ಭಜರಂಗ್ ಪೂನಿಯಾ ಮತ್ತು ವಿನೇಶ್ ಪೊಗಟ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಮುಂದಿನ ತಿಂಗಳು ಹರಿಯಾಣ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಇಬ್ಬರು ಕುಸ್ತಿಪಟುಗಳು ಕಾಂಗ್ರೆಸ್ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.

ವಿನೇಶ್ ಪೊಗಟ್ ಜುಲಾನಾ ಕ್ಷೇತ್ರದಿಂದ ಹಾಗೂ ಭಜರಂಗ್ ಪೂನಿಯಾ ಬದ್ಲಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ. ಚುನಾವಣೆಗೆ ಸ್ಪರ್ಧಿಸುವ ಕುರಿತು ಬುಧವಾರ ಸಂಜೆ ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ ನಂತರ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments