Monday, September 16, 2024
Google search engine
Homeಜಿಲ್ಲಾ ಸುದ್ದಿಚಾಮುಂಡೇಶ್ವರಿ ಪ್ರಾಧಿಕಾರದಿಂದ ರಾಜಮನೆತನದ ಪರಂಪರೆಗೆ ಧಕ್ಕೆ: ಯದುವೀರ್ ಒಡೆಯರ್ ಅಸಮಾಧಾನ

ಚಾಮುಂಡೇಶ್ವರಿ ಪ್ರಾಧಿಕಾರದಿಂದ ರಾಜಮನೆತನದ ಪರಂಪರೆಗೆ ಧಕ್ಕೆ: ಯದುವೀರ್ ಒಡೆಯರ್ ಅಸಮಾಧಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಿಯಮ ಬಾಹಿರವಾದುದು ಎಂದು ಬಿಜೆಪಿ ಸಂಸದ ಹಾಗೂ ಮೈಸೂರು ರಾಜವಂಶಸ್ಥ ಯಧುವೀರ್ ಒಡೆಯರ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರದ ರಚನೆ ಹಾಗೂ ಸಭೆ ರಾಜವಂಸ್ಥಸರ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಉಂಟು ಮಾಡಿದೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ ಎಂದರು.

ದೇವಸ್ಥಾನದ ಹುಂಡಿ ಹಣ ಆಯಾ ದೇವಸ್ಥಾನದ ಅಭಿವೃದ್ಧಿಗೆ ಬಳಕೆ ಆಗಬೇಕು. ಹಿಂದೂ ದೇವಾಲಯಗಳ ಮೇಲೆ ಏಕೆ ರೀತಿ ಮಾಡಲಾಗುತ್ತಿದೆ. ಪ್ರಾಧಿಕಾರ ರಚನೆಯಾದರೆ ನಮ್ಮ ಆಚರಣೆಗೂ ಅಡ್ಡಿಯಾಗುತ್ತದೆ. ಈ ಸಂಬಂಧ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಅವರು ಹೇಳಿದರು.

ತಡೆಯಾಜ್ಞೆ ನಡುವೆಯೂ ಸಭೆ ನಡೆಸುತ್ತಿರುವುದು ನ್ಯಾಯಾಂಗ ನಿಂದನೆ ಆಗುತ್ತದೆ. ನ್ಯಾಯಾಂಗ ನಿಂದನೆಗೆ ಒಳಪಡುವ ಸಭೆಗೆ ನಾನು ಹೋಗುವುದಿಲ್ಲ. ಪ್ರಾಧಿಕಾರ ರಚನೆ ಸಂಬಂಧ ಸೆಪ್ಟೆಂಬರ್​​ 5ರವರೆಗೆ ತಡೆಯಾಜ್ಞೆ ಇರುವುದು ಸತ್ಯ. ಮುಖ್ಯಮಂತ್ರಿಗಳು ಹೇಗೆ ತಡೆಯಾಜ್ಞೆ ತೆರವಾಗಿದೆ ಎಂದು ಹೇಳಿದರು ಗೊತ್ತಿಲ್ಲ ಎಂದು ಯದುವೀರ್ ಪ್ರತಿಕ್ರಿಯಿಸಿದರು.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಆಕ್ಷೇಪ ವ್ಯಕ್ತಪಡಿಸಿ ಪ್ರಮೋದಾದೇವಿ ಒಡೆಯರ್​ ಜುಲೈ 26 ರಂದು ತಡೆಯಾಜ್ಞೆ ತಂದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಜೂನ್​ 28 ರಂದು ಆದೇಶ ಹೊರಡಿಸಿತ್ತು.

ಜುಲೈ 1 ರಿಂದಲೇ ಕಾಯ್ದೆ ಜಾರಿಗೆ ಬಂದಿದೆ. ಹೀಗಾಗಿ ತಡೆಯಾಜ್ಞೆ ಮಧ್ಯಂತರ ಆದೇಶ ತೆರವು ಮಾಡಬೇಕು ಎಂದು ಮನವಿ ಮಾಡಿದರು. ಪ್ರಮೋದಾದೇವಿ ಒಡೆಯರ್​ ಪರ ವಕೀಲರು ಮತ್ತೆ ಮಧ್ಯಂತರ ಆದೇಶವನ್ನು ನೀಡಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಒಡೆಯರ್​ ಪರ ವಕೀಲರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್​ 5ಕ್ಕೆ ಮುಂದೂಡಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments