Home ತಾಜಾ ಸುದ್ದಿ 82ನೇ ವಯಸ್ಸಿಗೆ ಫೋಕ್ಸೊ ಕಾಯ್ದೆಯಡಿ ಕೇಸ್ ಹಾಕಿಸಿಕೊಂಡ ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ

82ನೇ ವಯಸ್ಸಿಗೆ ಫೋಕ್ಸೊ ಕಾಯ್ದೆಯಡಿ ಕೇಸ್ ಹಾಕಿಸಿಕೊಂಡ ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯಲಿ

by Editor
0 comments

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಸಚಿವ ಸಂಪುಟ ತೀರ್ಮಾನದ ಮೂಲಕ ಉತ್ತರ ನೀಡಲಾಗಿದ್ದು, ಅಇದನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ವಿಷಯದಲ್ಲಿ ಸಂಪೂರ್ಣವಾಗಿ ಕಾನೂನು ಪ್ರಕಾರ ನಡೆದಿರುವುದರಿಂದ ರಾಜ್ಯಪಾಲರು ಸರ್ಕಾರದ ಉತ್ತರವನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ ಯಾವುದೇ ರೀತಿಯ ಪ್ರಭಾವವನ್ನು ನಾನು ಬೀರಿಲ್ಲ. ಕಾನೂನು ಪ್ರಕಾರವಾಗಿರುವ ಹಿನ್ನೆಲೆಯಲ್ಲಿಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ 2021ರಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದು ಅವರು ಹೇಳಿದರು.

2014ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನನ್ನ ಪತ್ನಿ, ಮುಡಾ ಅಕ್ರಮವಾಗಿ ನಮ್ಮ ಜಮೀನು ಸ್ವಾಧೀನಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬದಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಳು. ಆ ಸಂದರ್ಭದಲ್ಲಿ ನಾನು ಈ ಕುರಿತು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ.

ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ನನ್ನ ಮೇಲೆ ಆಪಾದನೆಗಳನ್ನು ಮಾಡುತ್ತಿವೆ. ಆಪರೇಶನ್‌ ಕಮಲ ನಡೆಸಲು ಪ್ರಯತ್ನಿಸಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಾಗದ ಕಾರಣ ಇದನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕಳೆದ ಒಂದು ವರ್ಷದ ಅವಧಿಯಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ, ಬಡವರ ಪರವಾಗಿ ಕೆಲಸ ಮಾಡುತ್ತಿರುವುದನ್ನು ಸಹಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದರು.

banner

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಸ್ವತಃ ಪ್ರಧಾನಿಯವರೇ ಹೇಳಿದ್ದರು. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆ ವಿರುದ್ಧವಾಗಿ ಅವರು ಮಾತನಾಡುತ್ತಿದ್ದಾರೆ. ಒಂದು ವೇಳೆ ಗ್ಯಾರಂಟಿ ಯೋಜನೆ ಆರಂಭಿಸಿದರೂ, ಅದನ್ನು ನಿಲ್ಲಿಸಿ ಬಿಡುತ್ತಾರೆ ಎಂದಿದ್ದರು. ಆದರೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದಿಂದ ಅವರು ಹತಾಶರಾಗಿದ್ದಾರೆ ಎಂದರು.

ಈ ವಯಸ್ಸಿನಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಯುಡಿಯೂರಪ್ಪ ಅವರು ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗದೆ ಬಚಾವಾಗಿದ್ದಾರೆ. 82ರ ವಯಸ್ಸಿನಲ್ಲಿ ಇಂತಹ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಹಾಕಿಸಿಕೊಂಡಿರುವ ಯಡಿಯೂರಪ್ಪ ಅವರಿಗೆ ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರು ನೈತಿಕತೆ ಇದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತರಾಗಬೇಕು. ಅವರ ವಿರುದ್ಧ 20ಕ್ಕೂ ಅಧಿಕ ಪ್ರಕರಣಗಳು ಇದ್ದು, ಈ ಕುರಿತು ವಿವರವಾದ ಮಾಹಿತಿಯನ್ನು ನೀಡಲಿದ್ದೇನೆ.

ಯಡಿಯೂರಪ್ಪ ಅಧಿಕಾರದ ಅವಧಿಯಲ್ಲಿ ಚೆಕ್‌ ಮೂಲಕ ಲಂಚದ ಹಣವನ್ನು ಪಡೆದುಕೊಂಡಿದ್ದರು. ಅಕ್ರಮವಾಗಿ ಡಿನೋಟಿಫಿಕೇಶನ್‌ ಮಾಡಿದ್ದರು. ನಾವು ಅಂತಹ ಯಾವುದೇ ಅಕ್ರಮಗಳನ್ನು ಎಸಗಿಲ್ಲ. ವಿರೋಧ ಪಕ್ಷಗಳು ಸುಳ್ಳನ್ನು ನಿರಂತರವಾಗಿ ಹೇಳುವ ಮೂಲಕ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೇ ಅಂತಿಮ ಜಯ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
Mangaluru ಬೆಳ್ತಂಗಡಿಯ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು Test ranking ಅಗ್ರಸ್ಥಾನಕ್ಕೆ ಮರಳಿದ ಬುಮ್ರಾ, 2ನೇ ಸ್ಥಾನಕ್ಕೆ ಜಿಗಿದ ಜೈಸ್ವಾಲ್ ಬಿಜೆಪಿಗೆ ಮಹಾರಾಷ್ಟ್ರ ಸಿಎಂ ಪಟ್ಟ, 2 ಪಕ್ಷಗಳಿಗ ಡಿಸಿಎಂ ಸ್ಥಾನ? World News 60 ದಿನಗಳ ಕದನ ವಿರಾಮ ಘೋಷಿಸಿದ ಇಸ್ರೇಲ್-ಹೆಜಾಬುಲ್ಲಾ! ಬಿಸಿ ತುಪ್ಪವಾದ ಅದಾನಿ ಜೊತೆ ಬಾಂಧವ್ಯ ಕಡಿದುಕೊಳ್ಳಲು ಬಿಜೆಪಿ ನಿರ್ಧಾರ? Priyanka Gandhi ನ.28ಕ್ಕೆ ಸಂಸದೆಯಾಗಿ ಲೋಕಸಭೆ ಪ್ರವೇಶಿಸಲಿರುವ ಪ್ರಿಯಾಂಕಾ ಗಾಂಧಿ ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ!