ಸರ್ಕಾರದ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ಎನ್ ಐಎ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲರಿಗೆ ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನ್ಯಾಯಾಂಗ ಬಂಧನ ವಿಧಿಸಿದ ಬೆನ್ನಲ್ಲೇ ಪೊಲೀಸರು 6 ಮಂದಿ ನಕ್ಸಲರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.
ಮುಂಡಗಾರು ಲತಾ, ಸುಂದರಿ, ತಮಿಳುನಾಡಿನ ಕೆ.ವಸಂತ, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಸರ್ಕಾರದ ಮುಂದೆ ಶರಣಾಗುವ ಮೂಲಕ ಸಮಾಜಮುಖಿ ಆಗಲು ನಿರ್ಧರಿಸಿದ್ದರು.
ಶರಣಾದ ನಕ್ಸಲರನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ವಿಚಾರಣೆ ನಡೆಸಿದ ನಂತರ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದೆ.
ರಾಜ್ಯದ ನಕ್ಸಲ್ ಇತಿಹಾಸದಲ್ಲೇ 24 ವರ್ಷಗಳ ನಂತರ ಮೊದಲ ಬಾರಿ 6 ನಕ್ಸಲರು ಶರಣಾಗಿ ಕಾರ್ಯಕ್ರಮ ನಡೆದಿದ್ದು, ನಕ್ಸಲರು ಶರಣಾದರೂ ಅವರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಒಪ್ಪಿಸದೇ ಇರುವುದು ಅನುಮಾನಕ್ಕೆ ಕಾರಣವಾಗಿತ್ತು.