Monday, May 11, 2026
Home ಕಾನೂನು ಮಾಜಿ ಸಿಎಂ ಬೊಮ್ಮಾಯಿಗೆ ಬಿಗ್ ರಿಲೀಫ್: 2 ಪ್ರಚೋದನಕಾರಿ ಭಾಷಣ ಪ್ರಕರಣ ರದ್ದು!

ಮಾಜಿ ಸಿಎಂ ಬೊಮ್ಮಾಯಿಗೆ ಬಿಗ್ ರಿಲೀಫ್: 2 ಪ್ರಚೋದನಕಾರಿ ಭಾಷಣ ಪ್ರಕರಣ ರದ್ದು!

by Vahini
0 comments
basavaraj bommai

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧದ ಪ್ರಚೋದನಕಾರಿ ಭಾಷಣದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ರಾಜ್ಯ ಸರ್ಕಾರದ ಪ್ರತಿಭಟನಾ ರ‍್ಯಾಲಿಯಲ್ಲಿ ರೈತರು ಮತ್ತು ದೇವಾಲಯಗಳಿಗೆ ಸೇರಿದ ಆಸ್ತಿಗಳನ್ನು ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಸವರಾಜ ಬೊಮ್ಮಾಯಿ ವಿರುದ್ಧ ದಾಖಲಾಗಿದ್ದ 2 ಕ್ರಿಮಿನಲ್ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ಹೊರಡಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಬಸವರಾಜ ಬೊಮ್ಮಾಯಿ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠ ಶನಿವಾರ ಪ್ರಕರಣಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

ವಾದ-ಪ್ರತಿ ವಾದ ಆಲಿಸಿದ ನ್ಯಾಯಪೀಠ, ದೂರು ಮತ್ತು ಅದಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ನ್ಯಾಯಪೀಠ, ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಪೂರ್ವ ನಿದರ್ಶನಗಳನ್ನು ಉಲ್ಲೇಖಿಸಿ ಪ್ರಕರಣವನ್ನು ರದ್ದುಪಡಿಸಿದ್ದಾರೆ.

ಪ್ರಕರಣದ ಹಿನ್ನೆಲೆ

ವಕ್ಫ್ ಬೋರ್ಡ್ ಆಸ್ತಿ ವಿವಾದ ಸಂಬಂಧಿಸಿದಂತೆ ನಡೆದ ಪ್ರತಿಭಟನೆ ವೇಳೆ ರೈತರು ಮತ್ತು ದೇವಾಲಯಗಳ ಆಸ್ತಿಗಳನ್ನು ಕಬಳಿಸಿದ್ದಕ್ಕಾಗಿ ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ವಿರುದ್ಧ 2024ರ ನವೆಂಬರ್‌ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ್ದ ಅರ್ಜಿದಾರ ಬಸವರಾಜ ಬೊಮ್ಮಾಯಿ, ವಕ್ಫ್ ಮಂಡಳಿ ರೈತರ ಭೂಮಿಯನ್ನು ಕಬಳಿಸುತ್ತಿದೆ. ಸವಣೂರಿನಲ್ಲಿ ನಿಂತು ಎಲ್ಲಿಗೆ ಕಲ್ಲು ಎಸೆದರೂ ಅದು ವಕ್ಫ್ ಭೂಮಿ ಮೇಲೆ ಬೀಳುತ್ತದೆ ಎಂದು ಹೇಳಿದ್ದರು. ಈ ಹೇಳಿಕೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಪ್ರಕರಣ ಸಂಬಂಧ ಧರ್ಮ ಅಥವಾ ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಸೆಕ್ಷನ್ 196(1)(ಎ) ಅಡಿಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್​ ಠಾಣೆಗಳಲ್ಲಿ ಎಫ್​ಐಆರ್​ ದಾಖಲಾಗಿತ್ತು. ಇದನ್ನು ಪ್ರಶ್ನಿಸಿ ಬೊಮ್ಮಾಯಿ ಹೈಕೋರ್ಟ್​ ಮೆಟ್ಟಿಲೇರಿದ್ದರು.

ವಿಚಾರಣೆ ವೇಳೆ ಅರ್ಜಿದಾರ ಬೊಮ್ಮಾಯಿ ಪರವಾಗಿ ವಾದ ಮಂಡಿಸಿದ್ದ ವಕೀಲರು, ಪ್ರಕರಣ ಸಂಬಂಧ ದಾಖಲಾಗಿರುವ ದೂರುಗಳು ಸೆಕ್ಷನ್ 196(1)(ಎ) ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲು ಅಗತ್ಯವಾದ ಅಂಶಗಳನ್ನು ಹೊಂದಿಲ್ಲ. ಅರ್ಜಿದಾರರ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳು ಇಲ್ಲ ಎಂದು ತಿಳಿಸಿದರು.

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign