13
ಕೇಂದ್ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾಜಿ ಸಂಸದ ನಳೀನ್ ಕುಮಾರ್ ಕಟೀಲು ವಿರುದ್ಧದ ಚುನಾವಣಾ ಅಕ್ರಮ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಡಲಾಗಿದೆ ಎಂಬ ದೂರಿನಲ್ಲಿ ನಿರ್ಮಲಾ ಸೀತಾರಾಮನ್ ಮತ್ತು ನಳೀನ್ ಕುಮಾರ್ ಕಟೀಲ್ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.
ತಮ್ಮ ವಿರುದ್ಧದ ಎಫ್ ಐಆರ್ ರದ್ದುಗೊಳಿಸುವಂತೆ ಕೋರಿ ನಳೀನ್ ಕುಮಾರ್ ಕಟೀಲ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಎಫ್ ಐಆರ್ ರದ್ದುಗೊಳಿಸಲು ಸೂಚಿಸಿದೆ.