Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕಾನೂನು

ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಬಿಗ್ ರಿಲೀಫ್: ಲೋಕಾಯುಕ್ತ ಬಿ ರಿಪೋರ್ಟ್ ಸ್ವೀಕರಿಸಿದ ಕೋರ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
siddaramiah

ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ಹಲವರ ವಿರುದ್ಧದ ಮುಡಾ ಸೈಟು ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಈ ಮೂಲಕ ಸಿದ್ದರಾಮಯ್ಯ ಹಾಗೂ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್‌ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ಒಪ್ಪಿದೆ.

ಮುಡಾ ಹಗರಣದ ಆರೋಪಿಗಳಾಗಿದ್ದ ಸಿದ್ದರಾಮಯ್ಯ (A1), ಪಾರ್ವತಿ (A2), ಮಲ್ಲಿಕಾರ್ಜುನ ಸ್ವಾಮಿ (A3), ದೇವರಾಜು (A4) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸುವಂತೆ ಕೋರ್ಟ್‌ ಆದೇಶ ನೀಡಿದೆ.

ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ.ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.

ವಾದ ಆಲಿಸಿದ್ದ ನ್ಯಾಯಾಲಯ ಇಂದು ಬಿ-ರಿಪೋರ್ಟ್‌ ಅಂಗೀಕರಿಸಿದೆ. ನಾಲ್ವರು ಸಿದ್ದರಾಮಯ್ಯ (A1), ಪಾರ್ವತಿ (A2), ಮಲ್ಲಿಕಾರ್ಜುನ ಸ್ವಾಮಿ (A3), ದೇವರಾಜು (A4) ಅವರನ್ನು ದೋಷಮುಕ್ತಗೊಳಿಸಿದ್ದು, ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಸುವಂತೆ ಹೇಳಿದೆ.

ಏನಾಗಿತ್ತು?

ವಿಚಾರಣೆ ನಡೆಸಿದ್ದ ಕೋರ್ಟ್, ಈ ಹಿಂದೆ ಲೋಕಾಯುಕ್ತ ಪೊಲೀಸರು ಸಾಕಷ್ಟು ದೋಷಾರೋಪ ಪಟ್ಟಿ ಹಾಕಿದ್ದಾರೆ. ಆದರೆ ಯಾಕೆ ಅಂತಿಮ ವರದಿ ಸಲ್ಲಿಕೆ ಮಾಡುತ್ತಿಲ್ಲ ಎಂದು ಜಡ್ಜ್ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಲೋಕಾಯುಕ್ತ ವಿಶೇಷ ಸರ್ಕಾರಿ ಆಭಿಯೋಜಕ, ಈಗಾಗಲೇ ಅಂತಿಮ ವರದಿ ತಯಾರಿ ಆಗಿದೆ. ಅನುಮತಿ ಸಿಗದ ಕಾರಣ ಸಲ್ಲಿಕೆ ಮಾಡುತ್ತಿಲ್ಲ. ಸ್ವಲ್ಪ ಸಮಯ ನೀಡಿದರೆ ಸೀಲ್ಡ್ ಕವರ್‌ನಲ್ಲಿ ವರದಿ ನೀಡಲು ಸಿದ್ಧ ಎಂದು ತಿಳಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment