ಮೈಸೂರಿನ ಮುಡಾ ಸೈಟು ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ಜನವರಿ 25ಕ್ಕೆ ಮುಂದೂಡಿದೆ.
ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ಏಕಸದಸ್ಯ ಪೀಠ ನೀಡಿರುವ ಮಧ್ಯಂತರ ಆದೇಶ ಪ್ರಶ್ನಿಸಿ ಸಿದ್ದರಾಮಯ್ಯ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನು ಜನವರಿ 25ಕ್ಕೆ ನಿಗದಿಪಡಿಸಿದೆ.
ಪ್ರಕರಣದಲ್ಲಿ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್, 7 ದಿನಗಳ ವಿಳಂಬ ಮನ್ನಿಸಲು ಅವಕಾಶ ಕೋರಿ ಪ್ರತಿವಾದಿ ಮೇಲ್ಮನವಿ ಸಲ್ಲಿಕೆಗೆ ಸಮಯ ಕೇಳಿದ್ದರಿಂದ ವಿಚಾರಣೆಯನ್ನು ಮುಂದೂಡಿದೆ.
ಜನವರಿ 13 ಅಥವಾ 22ಕ್ಕೆ ದಿನಾಂಕ ನಿಗದಿಪಡಿಸಲು ಪ್ರತಿವಾದಿಗಳು ಮನವಿ ಮಾಡಿದರು. ಆದರೆ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ಮನವಿ ಮೇರೆಗೆ ಜನವರಿ 25ಕ್ಕೆ ವಿಚಾರಣೆ ನಿಗದಿಪಡಿಸಿ ಆದೇಶ ಹೊರಡಿಸಿತು.