Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕಾನೂನು

ಧರ್ಮಸ್ಥಳದ ಪ್ರಕರಣ ಮುಸುಕುಧಾರಿ ಚಿನ್ನಯ್ಯನ ಜಾಮೀನು ಅರ್ಜಿ ವಜಾ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 17 ವೀಕ್ಷಣೆಗಳು
dharmastala cheannyya

ಮಂಗಳೂರು: ಧರ್ಮಸ್ಥಳದ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುಸುಕುಧಾರಿ ಚಿನ್ನಯ್ಯನ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾ ಮಾಡಿದೆ.

ಚಿನ್ನಯ್ಯ ಜೈಲು ಸೇರಿದ ಮೇಲೆ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ಜಾಮೀನು ನೀಡದಂತೆ ಎಸ್​ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದರು.

ಎರಡು ಕಡೆಯಿಂದ ವಾದ-ಪ್ರತಿವಾದ ಆಲಿಸಿದ ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶ ವಿಜಯೇಂದ್ರ ಅವರು ಚಿನ್ನಯ್ಯನ ಜಾಮೀನು ಅರ್ಜಿ ವಜಾ ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಆರೋಪಿ ಚಿನ್ನಯ್ಯ ಜೈಲಿನಲ್ಲಿಯೇ ದಿನ ಕಳೆಯಬೇಕಾಗಿದೆ.

ಚಿನ್ನಯ್ಯ ತೋರಿಸಿದ್ದ ಜಾಗಗಳಲ್ಲಿ ಅಗೆದು ನೋಡಿದರೂ ಸಹ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಕೊನೆಗೆ ಎಸ್​ಐಟಿ ಅಧಿಕಾರಿಗಳೇ ಚಿನ್ನಯ್ಯನನ್ನು ಬಂಧಿಸಿ ಕಸ್ಟಡಿಗೆ ತೆಗೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಕಲೆ ಮಹತ್ವ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಸದ್ಯ ಚಿನ್ನಯ್ಯಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಭದ್ರತಾ ಕಾರಣಗಳಿಂದಾಗಿ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

ಹೆಚ್ಚು ಕಡಿಮೆ ಎರಡು ತಿಂಗಳು ಬುರುಡೆ ಬಿಟ್ಟಿದ್ದ ಚಿನ್ನಯ್ಯ, ಧರ್ಮಸ್ಥಳ ಸುತ್ತ ಮುತ್ತ 17 ಗುಂಡಿ ಅಗೆಸಿದ್ದ. ಕೊನೆಗೆ ನಾನು ಹೇಳಿದ್ದೆಲ್ಲ ಸುಳ್ಳು ಅಂತಾ ತಪ್ಪೊಪ್ಪಿಕೊಂಡಿದ್ದ. ಕಳೆದ 15 ದಿನದಿಂದ ತೀವ್ರ ವಿಚಾರಣೆ ನಡೆಸಿ ಮಹತ್ವದ ದಾಖಲೆಗಳನ್ನ ಸಂಗ್ರಹಿಸಿರುವ ಎಸ್‌ಐಟಿ ಅಧಿಕಾರಿಗಳು, ಬುರುಡೆ ಮ್ಯಾನ್‌ನನ್ನ ಜೈಲಿಗಟ್ಟಿದ್ದರು.

ಚಿನ್ನಯ್ಯನ ಹೇಳಿಕೆಗಳ ಆಧಾರದಲ್ಲಿ ಗಿಂಣ್ ಮಟ್ಟೆಣ್ಣವರ್, ಜಯಂತ್ ಬಿ., ಯೂಟ್ಯೂಬರ್ ಗಳಾದ ಸಮೀನ್ ಎಂ.ಡಿ. ಅಭಿಷೇಕ್ ವಿಚಾರಣೆ ನಡೆಸಲಾಗಿದೆ. ಸೌಜನ್ಯಾ ನಾಪತ್ತೆ ಮತ್ತು ಶಂಕಾಸ್ಪದ ಸಾವು ವಿಚಾರದಲ್ಲಿ ಚಿನ್ನಯ್ಯನ ತನಿಖೆ ನಡೆಸುವಂತೆ ಸೌಜನ್ಯಾ ತಾಯಿ ಕುಸುಮಾವತಿ ದೂರು ನೀಡಿದ್ದರು.

ಎಸ್‌ಐಟಿ ರಚನೆ ಆಗುವ ಮೊದಲೇ ದೂರುದಾರ ಚಿನ್ನಯ್ಯ ಮತ್ತು ತಂಡ ಕೇರಳದ ಸಂಸದರೊಬ್ಬರನ್ನು ಭೇಟಿ ಮಾಡಿ, ಸಮಾಲೋಚನೆ ಮಾಡಿತ್ತು ಎಂದು ಹೇಳಲಾಗುತ್ತಿದೆ. ಈ ವಿಷಯದ ಸತ್ಯಾಸತ್ಯತೆ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment