ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೆ ನೀಡಿ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಚಿನ್ನಯ್ಯ ಅವರನ್ನು ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಎಸ್ ಐಟಿ ಬಂಧಿಸಿತ್ತು.
ಎಸ್ ಐಟಿ ಕಳೆದ ವಾರ ಧರ್ಮಸ್ಥಳ ಪ್ರಕರಣದ ಕುರಿತು ಮಧ್ಯಂತರ ಚಾರ್ಜ್ ಶೀಟ್ ಸಲ್ಲಿಸಿದ ಹಿನ್ನೆಲೆಯಲ್ಲಿ ಚಿನ್ನಯ್ಯ ಗೆ 1 ಲಕ್ಷ ರೂ. ಬಾಂಡ್ ಹಾಗೂ 12 ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.
3000ಕ್ಕೂ ಅಧಿಕ ಪುಟಗಳ ಚಾರ್ಜ್ ಶೀಟ್ ನಲ್ಲಿ ಚಿನ್ನಯ್ಯ, ವಿಠಲಗೌಡ, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೂಡಿ ಸೇರಿದಂತೆ 6 ಮಂದಿಯ ವಿರುದ್ಧ ಎಸ್ ಐಟಿ ದೋಷಾರೋಪ ಮಾಡಲಾಗಿದೆ ಎಂದು ಹೇಳಲಾಗಿದೆ.


