ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ. ಈ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ನಿಂದನೆ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಬೆಳಗಾವಿ ವಿಧಾನಸಭೆ ಅಧಿವೇಶನದ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸದನದಲ್ಲಿ ನಿಂದಿಸಿರುವುದು ಅಲ್ಲಿನ ಆಡಿಯೋ ಮತ್ತು ವೀಡಿಯೋದಲ್ಲಿ ದಾಖಲಾಗಿದ್ದು, ಇದು ಎಫ್ ಎಸ್ ಎಲ್ ವರದಿಯಲ್ಲಿ 7 ಬಾರಿ ಹೇಳಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಿಟಿ ರವಿ ಅವರ ಧ್ವನಿ ಪರೀಕ್ಷೆಗೆ ಎಸ್ ಐಟಿ ಪೊಲೀಸರು ಮುಂದಾಗಿದ್ದರು.
ಧ್ವನಿ ಪರೀಕ್ಷೆಗೆ ಸಿಟಿ ರವಿ ನಿರಾಕರಿಸಿದ್ದರಿಂದ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿದ ಹೈಕೋರ್ಟ್ ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸಿಟಿ ರವಿ ಧ್ವನಿ ಮಾದರಿ ಬೇಕಿದೆ ಎಂದು ಸರ್ಕಾರದ ಪರ ವಕೀಲರು ವಾದ ಮಂಡಿಸಿದರು. ಈ ಬಗ್ಗೆ ವಿಚಾರಣೆ ಮುಂದೂಡಿರುವ ಹೈಕೋರ್ಟ್, ಅಲ್ಲಿಯವರೆಗೂ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಿದೆ.