Monday, 16 November 2026 — Kannadavahini
BREAKING NEWS
ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ!
ಕಾನೂನು

ಎಸ್ಸಿಗೆ ಶೇ.17, ಎಸ್ಟಿಗೆ ಶೇ.7ರಷ್ಟು ಮೀಸಲಾತಿ ಆದೇಶ ರದ್ದುಗೊಳಿಸಿದ ಹೈಕೋರ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 522 ವೀಕ್ಷಣೆಗಳು
karnataka high court
karnataka high court

ಬೆಂಗಳೂರು: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಜಾರಿಗೆ ತರಲಾಗಿದ್ದ ಕಾಯ್ದೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಶಿಕ್ಷಣ ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಿ ಸೇವೆಗಳಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿದ್ದ ಸರ್ಕಾರದ ಕ್ರಮಕ್ಕೆ ನ್ಯಾಯಾಲಯ ತಡೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ಹೈಕೋರ್ಟ್ ವಿಭಾಗೀಯ ಪೀಠ ಈ ಮಹತ್ವದ ಆದೇಶ ಹೊರಡಿಸಿದೆ.

ಮೀಸಲಾತಿ ಹೆಚ್ಚಳವನ್ನು ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿತ್ರಾ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿದ್ದ ಕ್ರಮವನ್ನು ರದ್ದುಗೊಳಿಸಿದೆ.

ಏನಿದು ಮೀಸಲಾತಿ ಹೆಚ್ಚಳ:

ಈ ಹಿಂದೆ ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ.15 ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.3ರಷ್ಟು ಮೀಸಲಾತಿ ಜಾರಿಯಲ್ಲಿತ್ತು. ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಜನಸಂಖ್ಯೆಯ ಆಧಾರದ ಮೇಲೆ ಎಸ್‌ಸಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ ಎಸ್‌ಟಿ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಸಮಿತಿಯ ವರದಿಗೆ ಸಂಬಂಧಿಸಿದಂತೆ ನಡೆದ ಸರ್ವಪಕ್ಷ ಸಭೆಯಲ್ಲಿ ಎಲ್ಲ ಪಕ್ಷಗಳೂ ಮೀಸಲಾತಿ ಹೆಚ್ಚಳದ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದವು.

ಬೊಮ್ಮಾಯಿ ಸರ್ಕಾರ ಸುಗ್ರೀವಾಜ್ಞೆ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಒಟ್ಟು ಶೇ.18ರಿಂದ ಶೇ.24ಕ್ಕೆ ಹೆಚ್ಚಿಸುವ ಸಂಬಂಧ ಅಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಕ್ರಮ ಕೈಗೊಂಡಿತ್ತು. ಈ ಸಂಬಂಧ ರಾಜ್ಯ ಸಚಿವ ಸಂಪುಟವು ಕರಡು ವಿಧೇಯಕಕ್ಕೆ ಅನುಮೋದನೆ ನೀಡಿದ ಬಳಿಕ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ರಾಜ್ಯಪಾಲರೂ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಿದ್ದರು.

ನಂತರ ಸರ್ಕಾರ ಅಧಿಕೃತ ರಾಜ್ಯಪತ್ರ ಪ್ರಕಟಿಸಿ, 103 ಉಪಜಾತಿಗಳನ್ನು ಒಳಗೊಂಡ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಹಾಗೂ 56 ಉಪಪಂಗಡಗಳನ್ನು ಒಳಗೊಂಡ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿತ್ತು.

50ರಿಂದ ಶೇ.56ಕ್ಕೆ ಏರಿಕೆ:

ಇದರಿಂದ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.50ರಿಂದ ಶೇ.56ಕ್ಕೆ ಏರಿಕೆಯಾಗಿತ್ತು. ಇದೀಗ ಈ ಮೀಸಲಾತಿ ಹೆಚ್ಚಳವನ್ನು ಹೈಕೋರ್ಟ್ ರದ್ದುಗೊಳಿಸಿರುವುದು ರಾಜ್ಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8419 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment