Thursday, December 25, 2025
Google search engine
Homeಕಾನೂನುಮಹೇಶ್ ತಿಮರೋಡಿ ಜಾಮೀನು ಅರ್ಜಿ ವಜಾ: 2 ದಿನ ಪೊಲೀಸ್ ಕಸ್ಟಡಿಗೆ

ಮಹೇಶ್ ತಿಮರೋಡಿ ಜಾಮೀನು ಅರ್ಜಿ ವಜಾ: 2 ದಿನ ಪೊಲೀಸ್ ಕಸ್ಟಡಿಗೆ

ಆರ್ ಎಸ್ ಎಸ್ ಮುಖಂಡ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಸ್ಥಳೀಯ ನ್ಯಾಯಾಲಯ 2 ದಿನ ಪೊಲೀಸ್ ಕಸ್ಟಡಿಗೆ ವಹಿಸಿದೆ.

ಗುರುವಾರ ಬೆಳಿಗ್ಗೆ ಬ್ರಹ್ಮಾವರ ಪೊಲೀಸರು ಬೆಳ್ತಂಗಡಿಯ ಉಜಿರೆಯ ಮನೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಸಂಜೆ ಬ್ರಹ್ಮಾವರ ಸಂಚಾರಿ ಪೀಠದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.

ಈ ವೇಳೆ ಮಹೇಶ್ ತಿಮರೋಡಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಧೀಶರು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments