ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖಾ ವರದಿ ಸಲ್ಲಿಕೆಗೆ ಲೋಕಾಯುಕ್ತ ಪೊಲೀಸರಿಗೆ ನೀಡಿದ್ದ ಗಡುವನ್ನು ಕರ್ನಾಟಕ ಹೈಕೋರ್ಟ್ ವಿಸ್ತರಿಸಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ದೂರಿನ ವಿಚಾರಣೆಯನ್ನು ಹೈಕೋರ್ಟ್ ಜನವರಿ 15ಕ್ಕೆ ಮುಂದೂಡಿದೆ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ, ಲೋಕಾಯುಕ್ತ ಪೊಲೀಸರಿಗೆ ಡಿಸೆಂಬರ್ 24ರೊಳಗೆ ವರದಿ ನೀಡುವಂತೆ ನೀಡಿದ್ದ ಗಡುವನ್ನು ಜನವರಿ 28ರವರೆಗೆ ವಿಸ್ತರಿಸಿದೆ.
ಲೋಕಾಯುಕ್ತ ಪೊಲೀಸರ ತನಿಖೆಗೆ ಯಾವುದೇ ತಡೆ ಇಲ್ಲ ಎಂದು ನ್ಯಾಯಪೀಠ ಹೇಳಿದ್ದು, ವಿಚಾರಣೆಯನ್ನ ಜನವರಿ 15ಕ್ಕೆ ಮುಂದೂಡಿಕೆ ಮಾಡಿದೆ.
ಈ ವಿಷಯವು ತನ್ನ ಪರಿಗಣನೆಯಲ್ಲಿರುವಾಗ ಲೋಕಾಯುಕ್ತ ವರದಿಯನ್ನು ಪಡೆಯಲು ಮತ್ತು ಅದರ ಮೇಲೆ ಕ್ರಮ ಕೈಗೊಳ್ಳಲು ಜಿಲ್ಲಾ ನ್ಯಾಯಾಲಯವು ಅನುಮತಿಸುವುದಿಲ್ಲ. ಈ ನ್ಯಾಯಾಲಯದ ಮುಂದಿರುವ ವಿಚಾರಣೆಯನ್ನು ರಕ್ಷಿಸಲು, ಅಂತಿಮ ವರದಿಯನ್ನು ಸಲ್ಲಿಸುವ ಗಡುವನ್ನು ಜನವರಿ 28, 2025 ರವರೆಗೆ ವಿಸ್ತರಿಸುವುದು ಸೂಕ್ತವೆಂದು ನಾನು ಭಾವಿಸುತ್ತೇನೆ ಎಂದು ಪೀಠ ಅಭಿಪ್ರಾಯಪಟ್ಟಿದೆ.