Home ಕಾನೂನು ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು; ಕೂಡಲೇ ಬಿಡುಗಡೆಗೆ ಸೂಚನೆ!

ಐಶ್ವರ್ಯ ಗೌಡ, ಹರೀಶ್ ಹೈಕೋರ್ಟ್ ಜಾಮೀನು; ಕೂಡಲೇ ಬಿಡುಗಡೆಗೆ ಸೂಚನೆ!

ಚಿನ್ನದಂಗಡಿ ಮಾಲೀಕರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಪತಿ ಕೆ. ಎನ್. ಹರೀಶ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

by Editor
0 comments
Aishwarya Gowda

ಚಿನ್ನದಂಗಡಿ ಮಾಲೀಕರಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಐಶ್ವರ್ಯಾ ಗೌಡ ಮತ್ತು ಪತಿ ಕೆ. ಎನ್. ಹರೀಶ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಚಂದ್ರಾಲೇಔಟ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಐಶ್ವರ್ಯಾ ಗೌಡ ಮತ್ತು ಅವರ ಪತಿ ಕೆ. ಎನ್. ಹರೀಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರ ಪೀಠ ಇಬ್ಬರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿದೆ.

ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಪೊಲೀಸರು ನೀಡಿದ್ದ ನೋಟಿಸ್‌ಗೆ ಪೂರಕವಾಗಿ ಸ್ಪಂದಿಸಿ, ಸ್ವಯಿಚ್ಛೆಯಿಂದ ಠಾಣೆಗೆ ತೆರಳಿ ತನಿಖೆಗೆ ಸಹಕರಿಸಿದ್ದರು. ಆದರೆ, ಪೊಲೀಸರು ವಿಚಾರಣೆ ಪೂರ್ಣಗೊಳಿಸುವ ಮುನ್ನವೇ ಯಾವುದೇ ಸಕಾರಣ ತಿಳಿಸದೇ ಏಕಾಏಕಿ ಇಬ್ಬರನ್ನು ಬಂಧಿಸಿದ್ದರು.

ತನಿಖೆಗೆ ಸಹಕರಿಸುತ್ತಿದ್ದರೂ ಕಾರಣ ನೀಡದೇ ಬಂಧಿಸಿರುವುದು ಸುಪ್ರೀಂ ಕೋರ್ಟ್ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದ್ದು, ಕಾನೂನು ಬಾಹಿರವಾಗಿದೆ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಅರ್ಜಿದಾರರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪೊಲೀಸರಿಗೆ ಸೂಚಿಸಿದೆ.

banner

ಆರೋಪಿಗಳು ಪೊಲೀಸರ ತನಿಖೆಗೆ ಸೂಕ್ತವಾಗಿ ಸಹಕರಿಸಬೇಕು ಎಂದು ಷರತ್ತು ವಿಧಿಸಿರುವ ಹೈಕೋರ್ಟ್, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಚಂದ್ರಾಲೇಔಟ್ ಠಾಣಾ ಪೊಲೀಸರು ಮತ್ತು ದೂರುದಾರೆ ವನಿತಾ ಐತಾಳ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
700 ಮಹಿಳೆಯರಿಗೆ ವಂಚಿಸಿದ 23 ವರ್ಷದ ಯುವಕ! ಕಾಶ್ಮೀರಕ್ಕೆ ಕಶ್ಯಪ ಋಷಿ ಹೆಸರು ಮರುನಾಮಕರಣ: ಸುಳಿವು ನೀಡಿದ ಅಮಿತ್ ಶಾ? ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ! ಭಾರತದಲ್ಲೂ ಚೀನಾದ ಎಚ್ ಎಂವಿಪಿ ವೈರಸ್ ಭೀತಿ: ರೋಗ ಲಕ್ಷಣಗಳೇನು? ಗಾಢ ಮಂಜು: ಉತ್ತರ ಭಾರತದಲ್ಲಿ 200ಕ್ಕೂ ವಿಮಾನಗಳ ಸಂಚಾರ ವ್ಯತ್ಯಾಯ ದೂರು ನೀಡಲು ಬಂದ ಮಹಿಳೆ ಜೊತೆ ರಾಸಲೀಲೆ: ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಅರೆಸ್ಟ್ ಬೀದಿ ಬದಿ ವ್ಯಾಪಾರದ ರಸ್ತೆಗಳನ್ನು ಗುರುತಿಸಲು ಬಿಬಿಎಂಪಿ ಆಯುಕ್ತ ತುಷಾರ್ ಗಿರಿ ನಾಥ್ ಸೂಚನೆ 2700 ಕೋಟಿಯ ಮನೆ, 8400 ಕೋಟಿಯ ವಿಮಾನದಲ್ಲಿ ಹಾರಾಡುವ ಪ್ರಧಾನಿ: ಕೇಜ್ರಿವಾಲ್ ಟೀಕೆ ನಟ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್: ಕಾಲ್ತುಳಿತ ಪ್ರಕರಣದಲ್ಲಿ ಜಾಮೀನು ಮಂಜೂರು ಐಶ್ವರ್ಯ ಗೌಡ ಪ್ರಕರಣದಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು: ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದೇನು?