Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕಾನೂನು

ಜ್ಞಾನೇಶ್ ಕುಮಾರ್ ಆದೇಶ ಏಕಪಕ್ಷೀಯವಾಗಿದ್ದರೆ ತಡೆ: ಸುಪ್ರೀಂಕೋರ್ಟ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 553 ವೀಕ್ಷಣೆಗಳು
gyanesh kumar

ನವದೆಹಲಿ: ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಏಕಪಕ್ಷೀಯ ತೀರ್ಮಾನಗಳನ್ನು ಕೈಗೊಂಡಿದ್ದು ಸಾಬೀತಾದರೆ ಅವರ ಎಲ್ಲಾ ನಿರ್ಧಾರಗಳಿಗೆ ತಡೆ ನೀಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿರುವ ಸುಪ್ರೀಂಕೋರ್ಟ್ ವಿವಾದದ ಕುರಿತು ವಿವರಣೆ ನೀಡುವಂತೆ ಚುನಾವಣಾ ಆಯೋಗ ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಎಸ್ ಐಆರ್ ಪ್ರಕ್ರಿಯೆ ಸೇರಿದಂತೆ ಹಲವು ಮಹತ್ವದ ತೀರ್ಮಾನಗಳನ್ನು ಏಕಪಕ್ಷೀಯವಾಗಿ ಕೈಗೊಂಡು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಸುಪ್ರೀಂಕೋರ್ಟ್, ಚುನಾವಣಾ ಆಯೋಗದ ಕಾರ್ಯವೈಖರಿ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ ಹಾಗೂ ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ನಿ ಹಾಗೂ ವಿ. ಮೋಹನ ನೇತೃತ್ವದ ತ್ರಿಸದಸ್ಯ ಪೀಠ ಪಟ್ನಾ ನಿವಾಸಿ ರಾಕೇಶ್ ಕುಮಾರ್ ಸಿಂಗ್ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ವಿಕಾಸ್ ಸಿಂಗ್ ಹಾಜರಾದರು. ಅವರ ಅರ್ಜಿಯನ್ನು ಆಲಿಸಿದ ಕೋರ್ಟ್, ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿ, ಒಂದು ವಾರದೊಳಗೆ ಉತ್ತರಿಸಲು ಸೂಚಿಸಿದೆ.

ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ಅವಿರೋಧ ನಿರ್ಧಾರ ಕೈಗೊಂಡಿದ್ದಾರೋ ಅಥವಾ ಬಹುಮತದ ಮೇಲೆ ನಿರ್ಧಾರ ಕೈಗೊಂಡಿದ್ದಾರೋ ಎಂಬುದು ದಾಖಲೆಗಳನ್ನು ನೋಡಿ ತೀರ್ಮಾನಿಸಬೇಕಾಗಿದೆ. ಮಾಧ್ಯಮಗಳ ವರದಿ ಆಧರಿಸಿ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಏಕಪಕ್ಷೀಯ ತೀರ್ಮಾನ ಕೈಗೊಂಡಿದ್ದರೆ ಅವರ ತೀರ್ಮಾನಗಳಿಗೆ ತಡೆ ನೀಡಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ಮುಖ್ಯ ಚುನಾವಣಾಧಿಕಾರಿ ಹಾಗೂ ಇಬ್ಬರು ಚುನಾವಣಾ ಆಯುಕ್ತರ ನಡುವೆ ಅಸಮಾಧಾನ ಮತ್ತು ಭಿನ್ನಾಭಿಪ್ರಾಯವಿದೆ. ಸ್ವತಃ ಆಯುಕ್ತರು ಜ್ಞಾನೇಶ್ ಕುಮಾರ್ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ 10 ತಿಂಗಳಲ್ಲಿ 14 ವಿಷಯಗಳಲ್ಲಿ ಭಿನ್ನಾಭಿಪ್ರಾಯ ಇರುವುದಾಗಿ ಹೇಳಿದ್ದಾರೆ ಎಂದು ಅರ್ಜಿದಾರರು ವಿವರಿಸಿದ್ದರು.

ಚುನಾವಣಾ ಆಯುಕ್ತರು ಒಟ್ಟಾಗಿ ನಿರ್ಧಾರ ತೆಗೆದುಕೊಳ್ಳಬೇಕು ಎನ್ನುವುದು ಕಾನೂನು, ಆದರೆ ಜ್ಞಾನೇಶ್ ಕುಮಾರ್ ಏಕಪಕ್ಷೀಯವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪವನ್ನು ಪರೀಶಿಲನೆ ನಡೆಸಬೇಕು, ಒಂದು ವೇಳೆ ಹಾಗೆ ಮಾಡಿದ್ದರೆ ಅವರ ನಿರ್ಧಾರವನ್ನು ಕಾನೂನು ಬಾಹಿರ ಎಂದು ಘೋಷಿಸಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಚುನಾವಣಾ ಆಯೋಗವು ಸರ್ವಾನುತಮದಿಂದ ಅಥವಾ ಬಹುಮತದಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಆಯೋಗ ಅದೇ ರೀತಿ ನಡೆದುಕೊಂಡಿದೆ ಎಂದು ನಾವು ಭಾವಿಸುತ್ತೇವೆ ಎಂದು ಕೋರ್ಟ್ ಹೇಳಿತು.

ಫಾರಂ-6 ಪರಿಷ್ಕರಣೆ ಮಾಡಿಲ್ಲ: ಸುಪ್ರೀಂ ಸ್ಪಷ್ಟನೆ

ಫಾರಂ-6 ಅರ್ಜಿಯಲ್ಲಿ ಬದಲಾವಣೆ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಬದಲಾವಣೆಗೆ ನಾವು ಸೂಚಿಸುವುದಾಗಲಿ, ಅನುಮತಿ ನೀಡುವುದಾಗಲಿ ಮಾಡಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇವೆ ಎಂದು ಹೇಳಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment