Monday, 16 November 2026 — Kannadavahini
BREAKING NEWS
ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ!
ಕಾನೂನು

ತೆಹೆಲ್ಕಾ ಸಂಪಾದಕ ತರುಣ್ ತೇಜಪಾಲ್ ಗೆ 10 ವರ್ಷ ಜೈಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 17 ವೀಕ್ಷಣೆಗಳು
tarun tejpal

ಮುಂಬೈ: 2013ರ ರಾಷ್ಟ್ರಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ‘ತೆಹೆಲ್ಕಾ’ ನಿಯತಕಾಲಿಕೆಯ ಮಾಜಿ ಮುಖ್ಯ ಸಂಪಾದಕ ತರುಣ್ ತೇಜಪಾಲ್ ಅವರಿಗೆ ಬಾಂಬೆ ಹೈಕೋರ್ಟ್‌ ಗುರುವಾರ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ಬಾಂಬೆ ಹೈಕೋರ್ಟ್‌ನ ಗೋವಾ ಪೀಠ, 2021ರಲ್ಲಿ ಕೆಳ ಹಂತದ ಸೆಷನ್ಸ್ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ರದ್ದುಗೊಳಿಸಿದ್ದು, ತೇಜ್‌ಪಾಲ್ ತಪ್ಪಿತಸ್ಥ ಎಂದು ಸೋಮವಾರ ಬೆಳಗ್ಗೆ ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಕಾಯ್ದರಿಸಿತ್ತು.

ಗುರುವಾರ ಮಧ್ಯಾಹ್ನ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದ ನ್ಯಾಯಮೂರ್ತಿಗಳಾದ ಡಾ. ನೀಲಾ ಗೋಖಲೆ ಮತ್ತು ಅಮಿತ್ ಜಮಸಂಡೇಕರ್ ಅವರನ್ನೊಳಗೊಂಡ ವಿಭಾಗೀಯ ಪೀಠ, ತರುಣ್ ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆಯ ಜೊತೆ 5 ಲಕ್ಷ ರೂ. ದಂಡ ವಿಧಿಸಿ ಶಿಕ್ಷೆಯನ್ನೂ ಪ್ರಕಟಿಸಿತು.

ನ್ಯಾಯಾಲಯ ಅಪರಾಧಿ ತರುಣ್ ತೇಜ್‌ಪಾಲ್‌ಗೆ ಶರಣಾಗಲು 2 ವಾರಗಳ ಕಾಲಾವಕಾಶ ನೀಡಿದ್ದು, ತೀರ್ಪಿನ ನಂತರ ಮಾಜಿ ಸಂಪಾದಕ, ತಾನು “ರಾಜಕೀಯಕ್ಕೆ ಬಲಿಯಾಗಿದ್ದೇನೆ” ಮತ್ತು ತಮ್ಮ ಶಿಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376(2)(f), 376(2)(k) (ಅತ್ಯಾಚಾರ) ಹಾಗೂ ಸೆಕ್ಷನ್ 354A, 354B (ಲೈಂಗಿಕ ಕಿರುಕುಳ) ಅಡಿಯಲ್ಲಿ 62 ವರ್ಷದ ತೇಜ್‌ಪಾಲ್ ದೋಷಿ ಎಂದು ನ್ಯಾಯಪೀಠ ತೀರ್ಮಾನಿಸಿದೆ.

2013ರ ನವೆಂಬರ್‌ನಲ್ಲಿ ಗೋವಾದ ರೆಸಾರ್ಟ್‌ನಲ್ಲಿ ನಡೆದ ತೆಹಲ್ಕಾ ಮ್ಯಾಗಜಿನ್‌ನ ವಾರ್ಷಿಕ ‘ಥಿಂಕ್‌ಫೆಸ್ಟ್’ ಕಾರ್ಯಕ್ರಮದ ವೇಳೆ, ಲಿಫ್ಟ್‌ನೊಳಗೆ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಮಹಿಳಾ ಉದ್ಯೋಗಿಯೊಬ್ಬರು ತರುಣ್ ತೇಜ್‌ಪಾಲ್ ವಿರುದ್ಧ ಆರೋಪಿಸಿದ್ದರು.

2017 ರಲ್ಲಿ ಮಾಪುಸಾ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿ 2021 ರಲ್ಲಿ ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಗೋವಾ ಸರ್ಕಾರ ಹೈಕೋರ್ಟ್‌ ಮೆಟ್ಟಿಲೇರಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8419 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment