Home ಕಾನೂನು ವಾಲ್ಮೀಕಿ ಹಗರಣ ಸಿಬಿಐಗೆ ವಹಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

ವಾಲ್ಮೀಕಿ ಹಗರಣ ಸಿಬಿಐಗೆ ವಹಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!

by Editor
0 comments
karnataka high court

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ ೩೦ರಂದು ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಬುಧವಾರ ತೀರ್ಪು ನೀಡಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

ಬೆಂಗಳೂರು ಪೂರ್ವ ವಲಯದ ಸಿಬಿಐ ಡಿಜಿಎಂ ಜೆ. ಮಹೇಶ್ ಈ ಹಿಂದೆಯೇ  ಸರ್ಕಾರಿ ಅಧಿಕಾರಿಗಳು,‌ ಜನಪ್ರತಿನಿಧಿಗಳು, ಖಾಸಗಿ ವ್ಯಕ್ತಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಯೂನಿಯನ್ ಬ್ಯಾಂಕ್‌ ಹಿರಿಯ ಅಧಿಕಾರಿಗಳ ದೂರಿನ ಅನ್ವಯ ಬ್ಯಾಂಕಿನ ಮೂವರು ಸೇರಿ ಐವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲು ಮಾಡಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸಿತ್ತು.

banner

ಎಸ್‌ಐಟಿ ಈಗಾಗಲೇ ಪ್ರಕರಣದ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ವಾಲ್ಮಿಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಬಗ್ಗೆ ಈಗಾಗಲೇ ಜಾರಿ ನಿರ್ದೇಶನಾಲಯ ಸಹ ತನಿಖೆ ನಡೆಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅರೆಸ್ಟ್! ರೈತರ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು: 8 ಮಂದಿಗೆ ಗಾಯ ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ! ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ!