Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕಾನೂನು

13 ವರ್ಷದಿಂದ ಕೋಮಾದಲ್ಲಿದ್ದ ಯುವಕನಿಗೆ ದಯಾಮರಣಕ್ಕೆ ಅನುಮತಿ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
Right To Die

ನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ 31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌ (ಒಪ್ಪಿಗೆ ನೀಡುವ ಮೂಲಕ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಉತ್ತರ ಪ್ರದೇಶದ ಗಾಜಿಯಾದ್‌ ಮೂಲದ ರೋಗಿಯ ಆರೋಗ್ಯ ಸ್ಥಿತಿಯ ಕುರಿತು ಎರಡು ವೈದ್ಯಕೀಯ ಮಂಡಳಿಗಳ ಅಭಿಪ್ರಾಯಗಳನ್ನು ಪರಿಗಣಿಸಿ ತೀರ್ಪು ಪ್ರಕಟಿಸಿದೆ. ನ್ಯಾಯಾಲಯವು ತನ್ನ ಮಾರ್ಗಸೂಚಿಗಳ ಅಡಿಯಲ್ಲಿ ನಿಷ್ಕ್ರಿಯ ದಯಾಮರಣವನ್ನು ಅನುಮತಿಸಿದ ಮೊದಲ ಪ್ರಕರಣ ಇದಾಗಿದೆ.

ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಹರೀಶ್ ರಾಣಾ 2013 ರಲ್ಲಿ ಪೇಯಿಂಗ್ ಗೆಸ್ಟ್‌ನ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಹರೀಶ್‌ ರಾಣಾ ಪೋಷಕರು ಮಗನಿಗೆ ದಯಾಮರಣ ನೀಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿಕೊಂಡಿದ್ದರು.

ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ ಬುಧವಾರ ಈ ಮಹತ್ವದ ತೀರ್ಪು ಪ್ರಕಟಿಸಿದ್ದು, ತನ್ನ ಆದೇಶದಲ್ಲಿ ದಯಾಮರಣ ಕುರಿತು ಕಾನೂನು ತರುವಂತೆ ಕೇಂದ್ರಕ್ಕೆ ಸಲಹೆ ನೀಡಿದೆ.

ಪ್ರಾಥಮಿಕ ಮತ್ತು ಮಾಧ್ಯಮಿಕ ವೈದ್ಯಕೀಯ ಮಂಡಳಿಗಳು ರೋಗಿಯ ಜೀವ ಬೆಂಬಲವನ್ನು ಹಿಂತೆಗೆದುಕೊಳ್ಳುವುದನ್ನು ಪ್ರಮಾಣೀಕರಿಸಿದ ನಂತರ ನ್ಯಾಯಾಂಗ ಹಸ್ತಕ್ಷೇಪ ಸಾಮಾನ್ಯವಾಗಿ ಅಗತ್ಯವಿರುವುದಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಚಿಕಿತ್ಸೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ವೈದ್ಯಕೀಯ ಮಂಡಳಿಗಳಿಂದ ಸೂಚನೆಯನ್ನು ಪಡೆಯುವಂತೆ ಕೋರ್ಟ್‌ ಹೈಕೋರ್ಟ್‌ಗೆ ಸೂಚಿಸಿದೆ.

ಹರೀಶ್‌ ರಾಣಾಗೆ ಏನಾಗಿತ್ತು?

ಚಂಡೀಗಢದಲ್ಲಿ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿದ್ದ ಹರೀಶ್ ರಾಣಾ ನಾಲ್ಕನೇ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಲೆಗೆ ಪೆಟ್ಟು ಬಿದ್ದ ಬಳಿಕ ಕೋಮಾಗೆ ಜಾರಿದ್ದರು. ಪಿಜಿಐ ಚಂಡೀಗಢ, ದೆಹಲಿಯ ಏಮ್ಸ್, ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ, ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆ ಮತ್ತು ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದರೂ ಚೇತರಿಕೆ ಕಂಡು ಬರಲಿಲ್ಲ

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment