Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕಾನೂನು

ಬಿಎಸ್ ಯಡಿಯೂರಪ್ಪಗೆ ಸಂಕಷ್ಟ: ತಡೆಯಾಜ್ಞೆ ತೆರವು ಬೆನ್ನಲ್ಲೇ ಸಮನ್ಸ್ ಜಾರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 41 ವೀಕ್ಷಣೆಗಳು
bs yadiyurappa
bs yadiyurappa

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ನಾಲ್ವರು ಆರೋಪಿಗಳಿಗೆ ಫೋಕ್ಸೊ ಪ್ರಕರಣದ ವಿಚಾರಣೆಗಾಗಿ ಖುದ್ದು ಹಾಜರಾತಿಗೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಬಾಲಕಿ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯ ಆರೋಪದಡಿ ಫೋಕ್ಸೊ ಕಾಯ್ದೆಯಡಿ ಬಿಎಸ್ ಯಡಿಯೂರಪ್ಪ ಹಾಗೂ ನಾಲ್ವರ ವಿಚಾರಣೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ರದ್ದುಗೊಳಿಸಿದ ಬೆನ್ನಲ್ಲೇ ಬೆಂಗಳೂರು ಸೆಷನ್ಸ್ ನ್ಯಾಯಾಲಯ ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಸೂಚಿಸಿದೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಈ ಪ್ರಕರಣ ಸಂಬಂಧ ಹೈಕೋರ್ಟ್ ಟ್ರಯಲ್‌ಗೆ ಅನುಮತಿ ನೀಡಿತ್ತು. ಇದೀಗ 1ನೇ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದು, ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ತಿಳಿಸಿದೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಈ ಪ್ರಕರಣ ಸಂಬಂಧ ಹೈಕೋರ್ಟ್ ಟ್ರಯಲ್‌ಗೆ ಅನುಮತಿ ನೀಡಿತ್ತು. ಇದೀಗ 1ನೇ ಫಾಸ್ಟ್‌ ಟ್ರ್ಯಾಕ್‌ ಕೋರ್ಟ್ ಬಿ.ಎಸ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿದ್ದು, ಡಿ.2ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ತಿಳಿಸಿದೆ.

ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಯಡಿಯೂರಪ್ಪನವರ ಅರ್ಜಿಯನ್ನು ವಜಾಗೊಳಿಸಿ ಟ್ರಯಲ್‌ಗೆ ಅನುಮತಿ ನೀಡಿತ್ತು.

ಏನಿದು ಪ್ರಕರಣ?

ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಬಿಎಸ್‌ವೈ ಮೇಲಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ನೀಡಿದ್ದರು.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO Case) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಾಕ್ಷ್ಯ ನಾಶಪಡಿಸಿದ ಮತ್ತು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಆರೋಪಗಳ ಮೇಲೆ ಯಡಿಯೂರಪ್ಪ ಮತ್ತು ಅವರ ಮೂವರು ಸಹಾಯಕರ ವಿರುದ್ಧ ಜೂನ್ 2024ರಲ್ಲಿ ಸಿಐಡಿ 750 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಪ್ರಕರಣದಲ್ಲಿ ದೂರು ನೀಡಿದ್ದ ಬಾಲಕಿಯ ತಾಯಿ ಮತ್ತು ಆ ಬಾಲಕಿ ಇಬ್ಬರೂ ಈಗಾಗಲೇ ಮ್ಯಾಜಿಸ್ಟ್ರೇಟ್ ಮುಂದೆ ಹೇಳಿಕೆಯನ್ನು ದಾಖಲಿಸಿದ್ದಾರೆ. ಬಾಲಕಿಯ ತಾಯಿ ಮೇ 26, 2024ರಂದು ನಿಧನರಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment