Thursday, December 25, 2025
Google search engine
Homeಕಾನೂನುರಾಜಕೀಯ ಉದ್ದೇಶಕ್ಕೆ ಇಡಿ ಬಳಕೆಗೆ ಸುಪ್ರೀಂಕೋರ್ಟ್ ಕಿಡಿ: ಮುಡಾ ಹಗರಣದ ಮೇಲ್ಮನವಿ ವಜಾ!

ರಾಜಕೀಯ ಉದ್ದೇಶಕ್ಕೆ ಇಡಿ ಬಳಕೆಗೆ ಸುಪ್ರೀಂಕೋರ್ಟ್ ಕಿಡಿ: ಮುಡಾ ಹಗರಣದ ಮೇಲ್ಮನವಿ ವಜಾ!

ಮುಡಾ ಹಗರಣ ಕುರಿತ ತನಿಖೆ ಕುರಿತು ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್​ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ನೋಟಿಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಹೈಕೋರ್ಟ್ ಆದೇಶದಲ್ಲಿ ನಮಗೆ ಯಾವುದೇ ಲೋಪ ಕಂಡು ಬಂದಿಲ್ಲ. ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುವ ಬಗ್ಗೆ ತೀವ್ರವಾಗಿ ಇಡಿಯನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠ, ದಯವಿಟ್ಟು ನಾವು ಬಾಯಿ ತೆರೆಯುವಂತೆ ಮಾಡಬೇಡಿ. ಹಾಗೆ ಮಾಡಿದರೆ ನಾವು ಕಟು ಟೀಕೆ ಮಾಡಬೇಕಾಗಿ ಬರುತ್ತದೆ ಎಂದು ಎಚ್ಚರಿಸಿತು.

ದುರದೃಷ್ಟವಶಾತ್, ನನಗೆ ಮಹಾರಾಷ್ಟ್ರದಲ್ಲಿ ಸ್ವಲ್ಪ ಅನುಭವವಿದೆ. ನೀವು ಈಗ ದೇಶಾದ್ಯಂತ ಈ ರೀತಿಯ ವರ್ತನೆ ಮುಂದುವರಿಸಬಾರದು. ರಾಜಕೀಯ ಪೈಪೋಟಿಯನ್ನು ಏನಿದ್ದರೂ ಮತದಾರರ ಎದುರು ಮಾಡಿಕೊಳ್ಳಲಿ. ಇಡಿಯನ್ನು ಏಕೆ ಎಂದು ಬಳಸಲಾಗುತ್ತಿದೆ ಎಂದು ಅಡಿಷನಲ್ ಸಾಲಿಸಿಟರ್ ಜನರಲ್ ಎಸ್​ವಿ ರಾಜಿ ಅವರನ್ನು ಸಿಜೆಐ ಬಿಆರ್ ಗವಾಯಿ ಪ್ರಶ್ನಿಸಿದರು.

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್​ಗೆಗೆ ಇಡಿ ನೀದಿದ್ದ ಸಮನ್ಸ್‌ಗೆ ತಡೆಯಾಜ್ಞೆ ನೀಡಿದ್ದ ಕರ್ನಾಟಕ ಹೈಕೋರ್ಟ್‌ 2025ರ ಮಾರ್ಚ್​​ನಲ್ಲಿ ಅದನ್ನು ರದ್ದುಗೊಳಿಸಿತ್ತು. ಇಡಿ ಜಾರಿಗೊಳಿಸಿದ್ದ ಸಮನ್ಸ್‌ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್‌ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ಕುರಿತು ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದ ನ್ಯಾ. ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments