Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

ವಿರಾಟ್ ಕೊಹ್ಲಿ 2ನೇ ಟೆಸ್ಟ್ ನಿಂದ ಹೊರಗೆ? ಅನುಮಾನ ಮೂಡಿಸಿದ ಕಾಲಿನ ಬ್ಯಾಂಡೇಜ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 34 ವೀಕ್ಷಣೆಗಳು
virat kolhi
virat kolhi

ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ ಕಾಲಿಗೆ ಬ್ಯಾಂಡೇಜ್ ಧರಿಸಿ ಓಡಾಡುತ್ತಿರುವುದು ಕಂಡು ಬಂದಿದ್ದು, ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವರೇ ಎಂಬ ಅನುಮಾನ ಉಂಟು ಮಾಡಿದೆ.

ಡಿಸೆಂಬರ್ 6ರಿಂದ ಅಡಿಲೇಡ್ ನಲ್ಲಿ ಹೊನಲು-ಬೆಳಕಿನಡಿ ಪಿಂಕ್ ಚೆಂಡಿನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಮೊದಲ ಪಂದ್ಯ ಗೆದ್ದು 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿರುವ ಭಾರತ ತಂಡಕ್ಕೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ.

ಮೂಲಗಳ ಪ್ರಕಾರ ವಿರಾಟ್ ಕೊಹ್ಲಿ ಮಂಡಿ ನೋವಿನಿಂದ ನರಳುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯರು ಬ್ಯಾಂಡೇಜ್ ಧರಿಸಿ ಓಡಾಡುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಹ್ಲಿ ಗಾಯದ ಕಾರಣ ೨ನೇ ಟೆಸ್ಟ್ ನಲ್ಲಿ ಆಡುವ ಬಗ್ಗೆ ಅನುಮಾನಗಳು ಉಂಟಾಗಿವೆ.

ವಿರಾಟ್ ಕೊಹ್ಲಿ ಪರ್ತ್ ಟೆಸ್ಟ್ ನಲ್ಲಿ ಶತಕ ಬಾರಿಸುವ ಮೂಲಕ ಒಂದೂವರೆ ವರ್ಷದ ನಂತರ ಮೊದಲ ಬಾರಿ ಟೆಸ್ಟ್ ಶತಕ ಸಿಡಿಸಿದ್ದರು. ಅಲ್ಲದೇ 3 ವರ್ಷಗಳಲ್ಲಿ ಅವರಿಂದ ಬಂದ ಮೂರನೇ ಶತಕವಾಗಿತ್ತು. ಫಾರ್ಮ್ ಕಂಡುಕೊಂಡ ಬೆನ್ನಲ್ಲೇ ಗಾಯದ ಪಟ್ಟಿ ಸೇರಿದ್ದಾರೆಯೇ ಎಂಬ ಪ್ರಶ್ನೆ ಕಾಡುತ್ತಿದೆ.

ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಶುಭಮನ್ ಗಿಲ್ ಮತ್ತು ರೋಹಿತ್ ಶರ್ಮ ತಂಡಕ್ಕೆ ಮರಳುತ್ತಿದ್ದಾರೆ. ಇದರಿಂದ ಆರಂಭಿಕ ಸ್ಥಾನದಲ್ಲಿ ಯಾರು ಆಡುತ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.

ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಮೊದಲ ಟೆಸ್ಟ್ ನಲ್ಲಿ ಅಮೋಘ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಇದೀಗ ಇಬ್ಬರು ಆರಂಭಿಕರು ಮರಳುತ್ತಿರುವುದರಿಂದ ಯಾರು ತಂಡಕ್ಕೆ ಮರಳುತ್ತಾರೆ? ಯಾರು ಆರಂಭಿಕ ಸ್ಥಾನಕ್ಕೆ ಇಳಿಯುತ್ತಾರೆ ಎಂಬ ಕುತೂಹಲ ಹೆಚ್ಚಾಗಿದೆ.

ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕಕ್ಕೆ ಇಳಿಯುವ ಸಾಧ್ಯತೆ ಇದೆ. ಶುಭಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದು, ಅಭ್ಯಾಸ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಆಡಿದ ರೋಹಿತ್ ಶರ್ಮ ಸ್ವತಃ ಹಿಂಬಡ್ತಿ ಪಡೆಯುವ ಸುಳಿವು ನೀಡಿದ್ದಾರೆ. ಆಸ್ಟ್ರೇಲಿಯಾ ತಂಡದ ಪ್ರಮುಖ ಬೌಲರ್ ಜೋಸ್ ಹಾಜೆಲ್ ವುಡ್ ಸ್ಥಾನಕ್ಕೆ ಬಾಂಡ್ ಮರಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment