Monday, June 29, 2026
Google search engine
Homeರಾಜ್ಯಹಾವೇರಿಯಲ್ಲಿ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಚಿರತೆ ಸಾವು

ಹಾವೇರಿಯಲ್ಲಿ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಚಿರತೆ ಸಾವು

ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.

ಅರಣ್ಯ ಪ್ರದೇಶದಲ್ಲಿ ನಿಧಾನವಾಗಿ ವಾಹನ ಚಲಾಯಿಸಿಕೊಂಡು ಹೋಗಬೇಕು ಎಂಬಸೂಚನೆ ಇದ್ದರೂ ಅತೀ ವೇಗವಾಗಿ ಚಲಾಯಿಸಿದ್ದ ವಾಹನ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದೆ.

ಶನಿವಾರ ಮುಂಜಾನೆ 3 ವರ್ಷದ ಚಿರತೆ ಮರಿ ರಸ್ತೆ ದಾಟುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.  ಘಟನೆಯ ಬಳಿಕ ಅಪರಿಚಿತ ವಾಹನದ ಪತ್ತೆಗಾಗಿ ಇಲಾಖೆ ಸಿಬ್ಬಂದಿ, ಪೊಲೀಸರು ಶೋಧ ಮಾಡುತ್ತಿದ್ದಾರೆ. ಸ್ಥಳಕ್ಕೆ ಶಿಗ್ಗಾಂವಿ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments