ಬೆಂಗಳೂರಿನ ಐಟಿ ಹಬ್ ಎಂದೇ ಹೆಸರಾದ ಎಲೆಕ್ಟ್ರಾನಿಕ್ ಸಿಟಿಯ ಟೋಲ್ ಪ್ಲಾಜಾ ಬಳಿ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯ ಅತೀ ಹೆಚ್ಚು ವಾಹನಗಳು ಸಂಚರಿಸುವ ಟೋಲ್ ಪ್ಲಾಜಾ ಬಳಿ ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಚಿರತೆ ರಸ್ತೆ ದಾಟುತ್ತಿರುವುದು ಕಂಡು ಬಂದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಪತ್ತೆಯಾಗಿದೆ.
ನೆಟ್ಟೂರು ಟೆಕ್ನಿಕಲ್ ಟ್ರೈನಿಂಗ್ ಫೌಂಡೇಷನ್ ಬಳಿ ಚಿರತೆ ರಸ್ತೆ ದಾಟುತ್ತಿದ್ದುದು ಕಂಡು ಬಂದಿದೆ. ಕೆಲವು ವಾರಗಳ ಹಿಂದೆಯಷ್ಟೇ ಜಿಗಣಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದರಿಂದ ಬೆಂಗಳೂರಿನಲ್ಲಿ ಆಗೊಮ್ಮೆ-ಈಗೊಮ್ಮೆ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.