Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಬೆಂಗಳೂರು

ಜಮ್ಮು-ಕಾಶ್ಮೀರದಲ್ಲಿ ಲಿಫ್ಟ್​ ಕುಸಿದು ಬೆಂಗಳೂರಿನ 6 ಮಂದಿಗೆ ಗಾಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
lift collepse

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದ ಬೆಂಗಳೂರಿನ 6 ಮಂದಿ ಪ್ರವಾಸಿಗರು ಲಿಫ್ಟ್​ ಕುಸಿದು ಗಾಯಗೊಂಡಿರುವ ದುರ್ಘಟನೆ ನಗರದ ಹೋಟೆಲ್​ನಲ್ಲಿ ಘಟನೆ ನಡೆದಿದೆ.

6 ಮಂದಿ ಸಾಮರ್ಥ್ಯದ ಲಿಫ್ಟ್​ನಲ್ಲಿ 11ಮಂದಿ  ಪ್ರವೇಶಿಸಿದ್ದರಿಂದ ಓವರ್​ಲೋಡ್​ ಆಗಿ ಲಿಫ್ಟ್​ ದಿಢೀರ್ ಕುಸಿದಿದೆ ಎಂದು ಹೈದರ್ಪೋರಾದ ಅರಿಸನ್ ಐಷಾರಾಮಿ ಹೋಟೆಲ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ವೆಂಕಟೇಶ್(65)​, ಮಂಗಳ(54), ಕುಶಲ್ಲಾ(18), ಪಂಕಜಾ(16), ವೆಂಕಟಲಕ್ಷ್ಮಮ್ಮ(60), ಮತ್ತು ಸೌಭಾಗ್ಯ(60) ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಗಳಾಗಿರುವ ಇವರು ಗುರುವಾರ ಶ್ರೀನಗರಕ್ಕೆ ಆಗಮಿಸಿದ್ದು, ಐದು ದಿನಗಳ ಕಾಲ ಹೋಟೆಲ್ ಬುಕ್ ಮಾಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಹೋಟೆಲ್ ಸಿಬ್ಬಂದಿ ಲಿಫ್ಟ್ ಪ್ಯಾನೆಲ್‌ಗಳನ್ನು ತೆರೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಗಾಯಾಳುಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಓರ್ವ ವ್ಯಕ್ತಿಯ ಮೂಳೆ ಮುರಿದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೇಸಿಗೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನೈಸರ್ಗಿಕ ಸೌಂದರ್ಯ, ಶ್ರೀನಗರದ ಪ್ರಸಿದ್ಧ ದಾಲ್ ಸರೋವರ ಮತ್ತು ಇಂದಿರಾ ಗಾಂಧಿ ಟುಲಿಪ್ ಉದ್ಯಾನ ನೋಡಲು ದೇಶ-ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment