Thursday, May 14, 2026
Google search engine
Homeರಾಜ್ಯಬಿಬಿಎಂಪಿ, ಬೆಸ್ಕಾಂ, ಆರೋಗ್ಯಾಧಿಕಾರಿ ಸೇರಿ 10 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ!

ಬಿಬಿಎಂಪಿ, ಬೆಸ್ಕಾಂ, ಆರೋಗ್ಯಾಧಿಕಾರಿ ಸೇರಿ 10 ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ!

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿವಿಧ ಇಲಾಖೆಗಳ 10 ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಬಿಬಿಎಂಪಿ, ಬೆಸ್ಕಾಂ, ಆರೋಗ್ಯ, ತೆರಿಗೆ ಇಲಾಖೆ ಸೇರಿದಂತೆ ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಕಲಬುರಗಿ, ರಾಯಚೂರು, ಗದಗ, ಹಾಗೂ ಚಿತ್ರದುರ್ಗದಲ್ಲಿ ದಾಳಿ ನಡೆದಿದೆ.

ಬೆಂಗಳೂರಿನ ಬೆಸ್ಕಾಂ ಸೂಪರಿಂಟೆಂಡೆಂಟ್ ಎಂಜಿನಿಯರ್ (ಎಲೆಕ್ಟ್ರಿಕಲ್ ) ಲೋಕೇಶ್ ಬಾಬು, ಬಿಬಿಎಂಪಿ ವಸಂತಪುರ ವಾರ್ಡ್ ಸಂಖ್ಯೆ 197ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯ ಡಿಎಫ್ ಪಿ ನಂಜುಂಡಯ್ಯ, ಗದಗ್ ನ ಇಇ ಕಚೇರಿಯ ಎಸ್ ಡಿ ಎ ಲಕ್ಷ್ಮಣ್, ಕಲಬುರಗಿ ಮಹಾನಗರ ಪಾಲಿಕೆ ಸಹಾಯಕ ಆಯುಕ್ತ ರಾಮಪ್ಪ ಅವರ ಮನೆ ಹಾಗೂ ಫಾರ್ಮ್ ಹೌಸ್, ರಾಯಚೂರಿನ ಅಬಕಾರಿ ನಿರೀಕ್ಷಕ ರಮೇಶ್ ಅಗಡಿ, ಚಿತ್ರದುರ್ಗದ ಹಿರಿಯೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್ ಮನೆ ಮೇಲೂ ದಾಳಿ ನಡೆದಿದೆ.

ಆರಂಭಿಕ ಮಾಹಿತಿ ಪ್ರಕಾರ ಈ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಅಪಾರ ಪ್ರಮಾಣದ ನಗದು, ಚಿನ್ನಾಭರಣ ಹಾಗೂ ಆಸ್ತಿಯ ದಾಖಲೆ ಪತ್ರಗಳು ಲಭ್ಯವಾಗಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments