Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ತಾಜಾ ಸುದ್ದಿ

ರಾಜ್ಯ ಸರ್ಕಾರ v/s ರಾಜ್ಯಪಾಲ: ರಾಜಭವನ ಅಧಿಕಾರಿಗಳ ವಿರುದ್ಧ ತನಿಖೆಗೆ ಲೋಕಾಯುಕ್ತ ಪತ್ರ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು
lokayukta

ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ರಾಜಭವನದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಅನುಮತಿ ಕೋರಿ ಡಿಜಿ-ಐಜಿಪಿಗೆ ಲೋಕಾಯುಕ್ತ ಎಸ್ ಐಟಿ ಐಜಿಪಿ ಪತ್ರ ಬರೆದಿದ್ದಾರೆ. ಈ ಮೂಲಕ ರಾಜಭವನ ಮತ್ತು ರಾಜ್ಯ ಸರ್ಕಾರದ ನಡುವಿನ ಸಮರ ತಾರಕಕ್ಕೇರಿದೆ.

ಲೋಕಾಯುಕ್ತ ಎಸ್ ಐಟಿ ಚಂದ್ರಶೇಖರ್ ಡಿಜಿ-ಐಜಿಪಿ ಮತ್ತು ಎಡಿಜಿಪಿಗೆ ಪತ್ರ ಬರೆದಿದ್ದು, ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಅಥವಾ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ಆಗಸ್ಟ್ 7 ರಂದು ಮಾಧ್ಯಮಗಳಲ್ಲಿ ಸೋರಿಕೆ ಆದ ಬಗ್ಗೆ ತನಿಖೆಗೆ ಅನುಮತಿ ಕೋರಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕೇಳಿಬಂದಿರುವ ಗಣಿ ನಿಯಮ ಉಲ್ಲಂಘನೆ ಆರೋಪದ ತನಿಖೆಗೆ ಅಥವಾ ಕಾನೂನು ಕ್ರಮ ತೆಗೆದುಕೊಳ್ಳಲು ಅನುಮತಿ ಕೋರಿ ಲೋಕಾಯುಕ್ತ 2023ರ ಸೆ.24ರಂದು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಕೆ ಮಾಡಿತ್ತು.

ನಿಯಮಗಳ ಪ್ರಕಾರ ನಾಲ್ಕು ತಿಂಗಳೊಳಗೆ ಕಡತ ವಿಲೇವಾರಿ ಮಾಡಬೇಕು. ಆದರೆ, 8 ತಿಂಗಳಿನಿಂದ ಕಡತ ರಾಜ್ಯಪಾಲರ ಸಚಿವಾಲಯದಲ್ಲೇ ಬಾಕಿ ಉಳಿದಿದೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಪ್ರಕಾರ ಸ್ಪಷ್ಟ ಉಲ್ಲಂಘನೆಯಾಗಿದೆ.

ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಕಾನೂನು ಕ್ರಮ ಅಥವಾ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ಆಗಸ್ಟ್ 7 ರಂದು ಮಾಧ್ಯಮಗಳಲ್ಲಿ ವರದಿ ಪ್ರಸಾರವಾಯ್ತು. ಸುದ್ದಿ ಪ್ರಸಾರವಾದ ಬಳಿಕ, ಅಗಸ್ಟ್​ 20ರಂದು ರಾಜ್ಯಪಾಲರು, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಪತ್ರ ಬರೆದು ಮಾಹಿತಿ ಹೇಗೆ ಸೋರಿಕೆ ಆಯ್ತು ಅಂತ ವರದಿ ಕೇಳಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment