Tuesday, May 19, 2026
Google search engine
Homeರಾಜ್ಯಬೈಕ್ ಗೆ ಲಾರಿ ಡಿಕ್ಕಿ: ಮಗಳು ಸೇರಿ ಮೂವರ ದುರ್ಮರಣ

ಬೈಕ್ ಗೆ ಲಾರಿ ಡಿಕ್ಕಿ: ಮಗಳು ಸೇರಿ ಮೂವರ ದುರ್ಮರಣ

ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.

ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ ಮಗಳು ಆರಾಧ್ಯಾ (7) ಮೃತಪಟ್ಟಿದ್ದಾರೆ.

ಮೃತ ಗಿರೇಪ್ಪಾ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments