Saturday, November 23, 2024
Google search engine
HomeUncategorizedಮದುವೆಗೆ ಒಪ್ಪದ ಶಿಕ್ಷಕಿಯನ್ನು ಶಾಲೆಯಲ್ಲೇ ಇರಿದು ಕೊಂದ ಪ್ರಿಯಕರ!

ಮದುವೆಗೆ ಒಪ್ಪದ ಶಿಕ್ಷಕಿಯನ್ನು ಶಾಲೆಯಲ್ಲೇ ಇರಿದು ಕೊಂದ ಪ್ರಿಯಕರ!

ಮದುವೆ ಪ್ರಸ್ತಾಪ ನಿರಾಕರಿಸಿದ ಶಿಕ್ಷಕಿಯನ್ನು ಪ್ರಿಯಕರ ಶಾಲೆಗೆ ನುಗ್ಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಇರಿದು ಕೊಂದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂ ಸರ್ಕಾರಿ ಸೆಕೆಂಡರಿ ಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ೨೬ ವರ್ಷದ ಶಿಕ್ಷಕಿ ರಮಣಿ ಹತ್ಯೆಯಾಗಿದ್ದಾರೆ. ಕೊಲೆಗೈದ ಮದನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ರಮಣಿ ಮತ್ತು ಮದನ್ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಗೆ ರಮಣಿ ಮನೆಯಲ್ಲಿ ನಿರಾಕರಿಸಿದ್ದಾರೆ. ಇದರಿಂದ ಎರಡೂ ಕುಟುಂಬಗಳ ನಡುವೆ ಅಸಮಾಧಾನ ಉಂಟಾಗಿದ್ದು, ರಮಣಿ ಮನೆಯವರ ವಿರೋಧ ಕಟ್ಟಿಕೊಳ್ಳಲು ಬಯಸದೇ ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದಾರೆ.

ಶಿಕ್ಷಕರ ಸ್ಟಾಫ್ ಕೊಠಡಿಯ ಹೊರಗೆ ರಮಣಿ ಅವರಿಗೆ ಮನ ಬಂದಂತೆ ಮದನ್ ಇರಿದಿದ್ದಾನೆ. ಕೂಡಲೇ ಶಿಕ್ಷಕಿಯನ್ನು ರಕ್ಷಿಸಲು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಯತ್ನಿಸಿದ್ದು, ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ತೀವ್ರ ರಕ್ತಸ್ರಾವದಿಂದ ಆಕೆ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡಲೇ ಮದನ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments