Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜ್ಯ

ಮಕ್ಕಳ ಶಾಲೆ ದಾಖಲು ವಯೋಮಿತಿ ಇಳಿಕೆ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
madhu bangarappa
madhu bangarappa

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ಇಲಾಖೆ ತುಸು ಸಡಿಲಗೊಳಿಸಿ 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಟ್ಟಿದೆ.

ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6 ವರ್ಷ ವಯೋಮಿತಿಯನ್ನು ಸಡಿಲಿಸಲಾಗಿದೆ. ಆದರೆ, ಒಂದನೇ ತರಗತಿ ಸೇರ್ಪಡೆಗೆ ಯುಕೆಜಿ ಆಗಿರಬೇಕು. ಆದರೆ, ಇದು ಈ ವರ್ಷಕ್ಕೆ ಮಾತ್ರ ಅನ್ವಯ. ಮುಂದಿನ ವರ್ಷದಿಂದ ಕಡ್ಡಾಯ ವಯೋಮಿತಿ 6 ವರ್ಷವೇ ಇರಲಿದೆ ಎಂದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟಪಡಿಸಿದರು.

ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶಾತಿ ನೀಡಲಾಗುವುದು ಮಕ್ಕಳಿಗೆ 5 ವರ್ಷ 5 ತಿಂಗಳಾಗಿರಬೇಕು. ಪೋಷಕರ ಒತ್ತಾಯದ ಮೇರೆಗೆ ಇದೊಂದು ವರ್ಷ ಮಾತ್ರ ಅವಕಾಶ. ಮುಂದಿನ ಶೈಕ್ಷಣಿಕ ವರ್ಷದಿಂದ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂದು ಮಧು ಬಂಗಾರಪ್ಪ ತಿಳಿಸಿದರು.

ಅತಿಯಾದ ಒತ್ತಡ ಬೇಡ:

ವಯಸ್ಸಿನ ಮಿತಿಯ ಬಗ್ಗೆ ಎಲ್ಲರೂ ಒತ್ತಡ ಹೇರುತ್ತಾ ಇದ್ದರು. ಈ ವಿಚಾರದಲ್ಲಿ ಪೋಷಕರಿಗೆ ಒಂದು ಮನವಿಯನ್ನು ಮಾಡುತ್ತಿದ್ದೇನೆ. ಮಕ್ಕಳನ್ನು ಯಂತ್ರದ ತರ ಓದಿಸಬೇಡಿ. ಹಾಗೆ ಮಾಡಿದರೆ ಮಕ್ಕಳಲ್ಲಿ ಒತ್ತಡ ಹೆಚ್ಚಾಗುತ್ತದೆ ಎಂದರು.

ವಯೋಮಿತಿ ವಿಚಾರದಲ್ಲಿ ಪೋಷಕರು ಗೊಂದಲದಲ್ಲಿದ್ದಾರೆ. ದೇಶದಲ್ಲಿ ಎಲ್ಲ ಕಡೆಗಳಲ್ಲಿ ಒಂದನೇ ತರಗತಿ ಸೇರ್ಪಡೆಗೆ ಆರು ವರ್ಷ ವಯೋಮಿತಿ ಇದೆ. ಎರಡು ತಿಂಗಳು ಮಾತ್ರ ಸಡಿಲಿಕೆ ಮಾಡಬಹುದಷ್ಟೆ. ನಮ್ಮದು ಎಸ್‌ಇಪಿ ಇರುವುದರಿಂದ, ಅವರ ಬಳಿ ಕೇಳಿದಾಗ, ಮಕ್ಕಳು ಕಡಿಮೆ ವಯಸ್ಸಿನಲ್ಲೇ ಸೇರಿಕೊಳ್ಳುತ್ತಿದ್ದಾರೆ ಎಂದಿದ್ದರು ಎಂದು ಸಚಿವರು ತಿಳಿಸಿದರು.

6 ವರ್ಷ ಕಡ್ಡಾಯಗೊಳಿಸಿದ್ದ ಸರ್ಕಾರ

ಒಂದನೇ ತರಗತಿಯ ಪ್ರವೇಶ ಪಡೆಯಲು ಮಕ್ಕಳಿಗೆ 6 ವರ್ಷ ಆಗಿರಬೇಕು ಎಂದು ಕರ್ನಾಟಕ ಶಿಕ್ಷಣ ಇಲಾಖೆ ಮೊದಲಿಗೆ 2022ರ ಜುಲೈನಲ್ಲಿ ಆದೇಶ ಹೊರಡಿಸಿತ್ತು. ಅದರಂತೆ 2023 – 24 ನೇ ಸಾಲಿನಲ್ಲಿ ಹೊಸ ನಿಯಮ ಜಾರಿಗೆ ಬರಬೇಕಿತ್ತು. ಆದರೆ ಪೋಷಕರಿಂದ ವ್ಯಾಪಕ ಆಕ್ಷೇಪ ವ್ಯಕ್ತವಾದ ಕಾರಣ, ಹೊಸ ನಿಯಮದ ಜಾರಿಯನ್ನು ಸರ್ಕಾರ ಮುಂದೂಡಿತ್ತು. ನಂತರ ನಿಯಮದಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿ, 2025-26ನೇ ಸಾಲಿನಿಂದ ಜಾರಿಗೆ ಬರಲಿದೆ ಎಂದು ಪ್ರಕಟಿಸಿತ್ತು. ಅದರಂತೆ ಈ ಶೈಕ್ಷಣಿಕ ವರ್ಷದಿಂದ 6 ವರ್ಷ ಕಡ್ಡಾಯವಾಗಿದೆ. ಆದರೆ, ಪೋಷಕರಿಂದ ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣ ಇದೀಗ ಸರ್ಕಾರ ಪಟ್ಟು ಸಡಿಲಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment