Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ಕ್ರೀಡೆ

ಐಪಿಎಲ್ 200ಕ್ಕಿಂತ ಅಧಿಕ ಮೊತ್ತ ಪೇರಿಸಿ ಇತಿಹಾಸ ಬರೆದ ಲಕ್ನೋ ಸೂಪರ್ ಜೈಂಟ್ಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
lsg

ಆರಂಭಿಕರಾದ ಮಿಚೆಲ್ ಮಾರ್ಷ್ ಮತ್ತು ಏಡಿಯನ್ ಮಾರ್ಕರಂ ಅರ್ಧಶತಕಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆ 204 ರನ್ ಗುರಿ ಒಡ್ಡಿದೆ. ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿ ಎಲ್ ಎಸ್ ಜಿ 200ಕ್ಕಿಂತ ಅಧಿಕ ಮೊತ್ತ ದಾಖಲಿಸಿದೆ.

ಲಕ್ನೋದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಲಕ್ನೋ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿದೆ. ಹಾರ್ದಿಕ್ ಪಾಂಡ್ಯ ಇದೇ ಮೊದಲ ಬಾರಿಗೆ 5 ವಿಕೆಟ್ ಪಡೆದು ಮಿಂಚಿದರೂ ಎಲ್ ಎಸ್ ಜಿ ಬೃಹತ್ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಗಿದೆ.

ಮಿಚೆಲ್ ಮಾರ್ಷ್ ಮತ್ತು ಮಾರ್ಕರಂ ಮೊದಲ ವಿಕೆಟ್ ಗೆ 76 ರನ್ ಜೊತೆಯಾಟ ನಿಭಾಯಿಸಿದರು. ಇದರಲ್ಲಿ 60 ರನ್ ಮಾರ್ಷ್ ಬ್ಯಾಟ್ ನಿಂದ ಹರಿದು ಬಂದಿತು. ಇದರಲ್ಲಿ 31 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಸೇರಿದ್ದವು. ಮಾರ್ಷ್ ನಂತರ ತಂಡವನ್ನು ಮುನ್ನಡೆಸಿದ ಮಾರ್ಕರಂ 38 ಎಸೆತಗಳಲ್ಲಿ 2 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 53 ರನ್ ಗಳಿಸಿದರು.

ಈ ಹಂತದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಬೌಲರ್ ಗಳು ತಿರುಗೇಟು ನೀಡಿದ್ದರಿಂದ ಸತತವಾಗಿ ವಿಕೆಟ್ ಕಳೆದುಕೊಂಡು ಕುಸಿಯುವ ಭೀತಿಗೆ ಸಿಲುಕಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಆಯುಷ್ ಬದೋನಿ (30) ಮತ್ತು ಡೇವಿಡ್ ಮಿಲ್ಲರ್ (27) ಉಪಯುಕ್ತ ಕಾಣಿಕೆ ನೀಡಿ ತಂಡ 200ರ ಗಡಿ ದಾಟಲು ನೆರವಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment