ನಾಯಕ ಕೆಎಲ್ ರಾಹುಲ್ ಸಿಡಿಲಬ್ಬರದ ಆಟದಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 197 ರನ್ ಗುರಿ ಒಡ್ಡಿದೆ.
ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು.
ಆರಂಭದಲ್ಲೇ ಕ್ವಿಂಟನ್ ಡಿಕಾಕ್ (8) ಮತ್ತು ಮಾರ್ಕೂಸ್ ಸ್ಟೋನಿಸಿಸ್ (0) ವಿಕೆಟ್ ಕಳೆದುಕೊಂಡರೂ ಕೆಎಲ್ ರಾಹುಲ್ ಮತ್ತು ದೀಪಕ್ ಹೂಡಾ ಮೂರನೇ ವಿಕೆಟ್ ಗೆ 115 ರನ್ ಜೊತೆಯಾಟದಿಂದ ತಂಡವನ್ನು ಬೃಹತ್ ಮೊತ್ತದತ್ತ ಮುನ್ನಡೆಸಿದರು.
ಕೆಎಲ್ ರಾಹುಲ್ 48 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಸಹಾಯದಿಂದ 76 ರನ್ ಸಿಡಿಸಿದರೆ, ದೀಪಕ್ ಹೂಡಾ 31 ಎಸೆತಗಳಲ್ಲಿ 7 ಬೌಂಡರಿ ಸಹಾಯದಿಂದ 50 ರನ್ ಗಳಿಸಿದರು. ಇವರಿಬ್ಬರು ಔಟಾಗುತ್ತಿದ್ದಂತೆ ತಂಡದ ರನ್ ವೇಗಕ್ಕೆ ಕಡಿವಾಣ ಬಿದ್ದಿದ್ದರಿಂದ 200ರ ಗಡಿ ದಾಟುವಲ್ಲಿ ವಿಫಲವಾಯಿತು.