ಜಪಾನ್ ಕಡಲ ತೀರ ನೋಡಾದಲ್ಲಿ ರಿಕ್ಟರ್ ಮಾಪಕದಲ್ಲಿ 6ರಷ್ಟು ತೀವ್ರತೆಯ ಭೂಕಂಪನ ಸಂಭವಿಸಿದೆ.
ಸಮುದ್ರದ ಆಳದಲ್ಲಿ 19.3 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಕಂಡುಬಂದಿದೆ. ಆದರೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಕಳೆದ ವಾರವಷ್ಟೇ 5.7 ತೀವ್ರತೆಯ ಭೂಕಂಪನ ಸಂಭವಿಸಿದ್ದರಿಂದ 30ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, 90 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಕಳುಹಿಸಲಾಗಿತ್ತು. ಜಗತ್ತಿನಲ್ಲೇ ಅತೀ ಹೆಚ್ಚು ಭೂಕಂಪನ ಸಂಭವಿಸುವ ದೇಶವಾಗಿದೆ.



