ಪೆರು ದೇಶದ ದ್ವೀಪದಲ್ಲಿ ಪ್ರಬಲ 7.2 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಸ್ಥಳೀಯರಿಗೆ ಸುನಾಮಿ ಮುನ್ನೆಚ್ಚರಿಕೆ ನೀಡಲಾಗಿದೆ.
ಅಮೆರಿಕದ ಭೂವಿಜ್ಞಾನ ಸಂಸ್ಥೆ ಭೂಕಂಪನ ದೃಢಪಡಿಸಿದ್ದು, ಅಟಿಕ್ಯುಪಾ ನಗರದಿಂದ ಸುಮಾರು 8.8 ಕಿ.ಮೀ. ದೂರದಲ್ಲಿ ಭೂಕಂಪನ ಸಂಭವಿಸಿದ್ದು, ಸಮುದ್ರ ತೀರದ ಪ್ರದೇಶಗಳಲ್ಲಿ ಸುನಾಮಿ ಕಾಣಿಸಿಕೊಳ್ಳಬಹುದು ಎಂದು ಎಚ್ಚರಿಸಿದೆ.
ಆರಂಭದಲ್ಲಿ ಭೂಕಂಪನದಿಂದ ಯಾವುದೇ ತೊಂದರೆ ಇಲ್ಲ ಎಂದು ಹೇಳಿತ್ತು. ನಂತರ ಸಮುದ್ರದಲ್ಲಿ ಉಂಟಾದ ಏರಿಳಿತಗಳನ್ನು ಗಮನಿಸಿ ಪೆಸಿಫಿಕ್ ಸಮುದ್ರದಲ್ಲಿ ಸಾಮಾನ್ಯಕ್ಕಿಂತ 3 ಮೀ. ಎತ್ತರದ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸಬಹುದು ಎಂದು ಮುನ್ನೆಚ್ಚರಿಕೆ ನೀಡಿದೆ.