ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಇದು ವೆನಿಜುವೆಲಾ ಗಡಿ ಭಾಗದಲ್ಲೂ ಭೂಮಿ ಕಂಪಿಸುವಂತೆ ಮಾಡಿದೆ.
ಸ್ಥಳೀಯ ಕಾಲಮಾನ ಪ್ರಕಾರ ಸೋಮವಾರ ಮಧ್ಯಾಹ್ಯ 12.30ರ ಸುಮಾರಿಗೆ ಸ್ಯಾನ್ ಜೋಸ್ ಡೆಲ್ ಪಾಲ್ಮರ್ ಬಳಿ 5 ಕಿ.ಮೀ. ಆಳದಲ್ಲಿ ಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.
ಪ್ರಬಲ ಭೂಕಂಪನ ಸಂಭವಿಸಿದ್ದರೂ ಸುನಾಮಿ ಭೀತಿ ಇಲ್ಲ ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ. ಆದರೆ ಅಪಾರ ಪ್ರಮಾಣದಲ್ಲಿ ಕಟ್ಟಡಗಳು ಹಾನಿಯಾಗಿರುವ ಕಾರಣ ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ.



