Friday, May 15, 2026
Google search engine
Homeರಾಜ್ಯಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ ಮಹಾರಾಷ್ಟ್ರದ ವ್ಯಕ್ತಿ ಅರೆಸ್ಟ್

ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಹಾಕಿದ ಮಹಾರಾಷ್ಟ್ರದ ವ್ಯಕ್ತಿ ಅರೆಸ್ಟ್

ಸಚಿವ ಪ್ರಿಯಾಂಕ್ ಖರ್ಗೆ ಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಲಾತೋರ್ ನಲ್ಲಿ ಕಲಬುರಗಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯದ ಸರ್ಕಾರಿ ಜಾಗಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಹೇರುವತೆ ಸಚಿವ ಪ್ರಿಯಾಂಕ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಸಾಕಷ್ಟು ಬೆದರಿಕೆ ಕರೆಗಳು ಬಂದಿದ್ದವು.

ಕರೆ ಮಾಡಿ ಬೆದರಿಕೆ ಹಾಕಿದ್ದ ಆರೋಪಿ ದಾನೇಶ್ ನರೋಣಿಯನ್ನು ಮಹಾರಾಷ್ಟ್ರದ ಲಾತೂರ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಸೊಲ್ಲಾಪುರ ಮೂಲದ ದಿನೇಶ್ ಪ್ರಕರಣ ದಾಖಲಾಗುತ್ತಿದ್ದಂತೆ ಲಾತೂರ್ ಗೆ ಪರಾರಿಯಾಗಿದ್ದ.

ಲಾತೂರ್ ನಲ್ಲಿ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ಕಲ್ಬುರ್ಗಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಇಂದು ರಾತ್ರಿ ವೇಳೆ ಆರೋಪಿಯನ್ನು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಗೆ ಕರೆದಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಚಾಕೋಲೇಟ್, ಬಿಸ್ಕೆಟ್ ಏಜೆಂಟ್ ಆಗಿರುವ ದಾನೇಶ್ ನರೋಣಿ, ಕುಡಿದ ಮತ್ತಿನಲ್ಲಿ ಬೆದರಿಕೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಪ್ರಿಯಾಂಕ್ ಖರ್ಗೆ ನಂಬರ್ ಗೂಗಲ್ ನಲ್ಲಿ ಇಲ್ಲದೇ ಇದ್ದರೂ ಹೇಗೆ ಸಿಕ್ಕಿತು ಎಂಬ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಈತ ಮೊದಲು ಪೊಲೀಸ್ ಸಂಖ್ಯೆಯಿಂದ ಕರೆ ಮಾಡಿ ನಂತರ ಮೊಬೈಲ್ ನಂಬರ್ ಬದಲಿಸಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ದೂರು ನೀಡಿದ್ದ ಪ್ರಿಯಾಂಕ್ ಖರ್ಗೆ

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ” RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ, ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.. ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ. ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ? ಎಂದು ಪ್ರಶ್ನಿಸಿದ್ದರು.

ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಮುಂತಾದ ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ, ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದಿದ್ದಾರೆ.

ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ದರನ್ನು ಬ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ. RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ, ಬಸವ, ಅಂಬೇಡ್ಕರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ.

ಮುಗ್ದ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ. ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ದ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ ಎಂದು ಅವರು ಟ್ವೀಟ್ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments