Sunday, May 31, 2026
Google search engine
Homeರಾಜ್ಯಮೂರನೇ ಬಾರಿಗೆ ಮಹೇಶ್‌ ತಿಮರೋಡಿ ಗಡಿಪಾರಿಗೆ ಆದೇಶ

ಮೂರನೇ ಬಾರಿಗೆ ಮಹೇಶ್‌ ತಿಮರೋಡಿ ಗಡಿಪಾರಿಗೆ ಆದೇಶ

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬೆಳ್ತಂಗಡಿಯಿಂದ ಪೊಲೀಸರು ಗಡೀಪಾರು ಮಾಡಿದ್ದು, ಮೂರನೇ ಬಾರಿಗೆ ಗಡೀಪಾರು ಮಾಡಲಾಗಿದೆ.

ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮೂರನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಮಾ.16, 2026 ರಿಂದ ಸೆ.19, 2026ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವಂತಿಲ್ಲ. ಈ ಆರು ತಿಂಗಳ ಅವಧಿ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನೆಲೆಸಬೇಕೆಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.

ಗಡೀಪಾರು ಆದೇಶದ ನೋಟಿಸ್‌ ನೀಡುವ ಸಂದರ್ಭದಲ್ಲಿ ಮಹೇಶ್‌ ತಿಮರೋಡಿ ಮನೆಯಲ್ಲಿ ಇಲ್ಲದ ಕಾರಣ ಬೆಳ್ತಂಗಡಿಯ ಉಜಿರೆಯಲ್ಲಿರುವ ಅವರ ಮನೆಯ ಗೋಡೆಯ ಮೇಲೆ ನೋಟೀಸ್‌ ಅಂಟಿಸಲಾಗಿದೆ.

ಹೈಕೋರ್ಟ್ ಮೆಟ್ಟಿಲೇರಿದ್ದ ತಿಮರೋಡಿ

ತಿಮರೋಡಿ ಅವರಿಗೆ ಈ ಹಿಂದೆ ಎರಡನೇ ಬಾರಿಗೆ ಗಡೀಪಾರು ಆದೇಶ ಹೊರಡಿಸಿದಾಗ, ಅವರು ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠವು, ಆದೇಶವನ್ನು ಮರು ಪರಿಶೀಲಿಸುವಂತೆ ಪುತ್ತೂರು ಎಸಿಗೆ ಸೂಚಿಸಿತ್ತು.

ಪ್ರತಿವಾದಿಗಳ ಆಕ್ಷೇಪಣೆಗಳನ್ನು ಆಲಿಸಿ, ಕಾನೂನುಬದ್ಧವಾಗಿ ಹೊಸ ಆದೇಶ ಹೊರಡಿಸಲು ಮೂರು ವಾರಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ನೀಡಿದ್ದ ಗಡುವಿನ ಹಿನ್ನೆಲೆಯಲ್ಲಿ ಈಗ ಮರುಪರಿಶೀಲನೆ ನಡೆಸಿ ಮೂರನೇ ಬಾರಿ ಈ ಆದೇಶ ಹೊರಡಿಸಲಾಗಿದೆ.

ಮಹೇಶ್ ಶೆಟ್ಟಿ ತಿಮರೋಡಿ ಅವರ ಮೇಲೆ ಸಾರ್ವಜನಿಕ ಶಾಂತಿ ಭಂಗಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಭಾಷಣಗಳು ಹಾಗೂ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments