Wednesday, May 20, 2026
Google search engine
Homeರಾಜಕೀಯಮಲ್ಲಿಕಾರ್ಜುನ ಖರ್ಗೆ ದೀಕ್ಷೆ ಕೊಟ್ಟಿದ್ದಾರೆ: ಡಿಕೆ ಶಿವಕುಮಾರ್

ಮಲ್ಲಿಕಾರ್ಜುನ ಖರ್ಗೆ ದೀಕ್ಷೆ ಕೊಟ್ಟಿದ್ದಾರೆ: ಡಿಕೆ ಶಿವಕುಮಾರ್

ಮಲ್ಲಿಕಾರ್ಜುನ ಖರ್ಗೆ ದೀಕ್ಷೆ ಕೊಟ್ಟಿದ್ದಾರೆ. ಆ ದೀಕ್ಷೆಯನ್ನು ಸಂತೋಷದಿಂದ ಸ್ವೀಕರಿಸಿದ್ದೇನೆ ಎಂದು ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ದೆಹಲಿಯಿಂದ ಶುಕ್ರವಾರ ಮರಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ನನಗೆ ಕೊಟ್ಟ ಜವಾಬ್ದಾರಿ ನಿಭಾಯಿಸುತ್ತೇನೆ. ಪಕ್ಷ ಕಟ್ಟುವ ಜವಾಬ್ದಾರಿ ಜೊತೆಗೆ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದರು.

ಮುಖ್ಯಮಂತ್ರಿ 5 ವರ್ಷ ನಾನೇ ಸಿಎಂ ಅಂತ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಶಾಸಕರ ಬೆಂಬಲ ಕಡಿಮೆ ಇದೆ ಎಂದು ಹೇಳಿದ್ದಾರೆ ಎಂಬ ಪ್ರಶ್ನೆಗೆ ಮುಖ್ಯಮಂತ್ರಿಗಳು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ. ನಿಮ್ಮ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಹಾಗಾಗಿ ನಾನು ಈ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಲಾರೆ ಎಂದು ಸ್ಪಷ್ಟಪಡಿಸಿದರು.

ದೆಹಲಿ ಪ್ರವಾಸದ ವೇಳೆ ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದು, ಫಲಪ್ರದವಾಗಿದೆ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments