ಜಮ್ಮು ಕಾಶ್ಮೀರದ ಕತುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾಗ ವೇದಿಕೆಯ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ.
ವಿಧಾನಸಭೆಯ ಮೂರನೇ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದ ವೇಳೆ ಪ್ರಚಾರ ರ್ಯಾಲಿಯಲ್ಲಿ ಪಾಲ್ಗೊಂಡಿದ್ದಾಗ ಕಣ್ಣು ಕತ್ತಲೆ ಬಂದಂತಾಗಿ ಕುಸಿದು ಬೀಳುತ್ತಿದ್ದರು. ಆದರೆ ಕೂಡಲೇ ಅವರನ್ನು ಹಿಡಿದು ರಕ್ಷಿಸಿದ್ದರು.
ನಂತರ ವೈದ್ಯರು ಪರೀಕ್ಷಿಸಿದಾಗ ರಕ್ತದೊತ್ತಡದ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದಾರೆ. ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದರು.
ನಂತರ ವೇದಿಕೆಗೆ ಮರಳಿದ ಮಲ್ಲಿಕಾರ್ಜುನ ಖರ್ಗೆ, ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ ಎಂದು ಅಸ್ವಸ್ಥಗೊಂಡ ಘಟನೆಗೆ ಪ್ರತಿಕ್ರಿಯಿಸಿದರು.
ನಾನು ಸಾಕಷ್ಟು ವಿಷಯ ಮಾತನಾಡಬೇಕು ಅಂತ ಇದ್ದೆ. ಆದರೆ ಕಣ್ಣು ಕತ್ತಲೆ ಬಂದಂತೆ ಆಗುತ್ತಿದೆ. ಆದ್ದರಿಂದ ಹೆಚ್ಚು ಮಾತನಾಡಲಾರೆ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ರಾಜಕೀಯ ಭಾಷಣ ಹಾಗೂ ಬಹಿರಂಗ ಪ್ರಚಾರ ಇಂದು ಅಂತ್ಯಗೊಂಡಿದ್ದು, ಅಕ್ಟೋಬರ್ 1ರಂದು ಜಮ್ಮು ಕಾಶ್ಮೀರದಲ್ಲಿ ಮೂರನೇ ಹಾಗೂ ಕೊನೆಯ ಹಂತದ ಚುನಾವಣೆ ನಡೆಯಲಿದೆ.