Friday, November 22, 2024
Google search engine
Homeದೇಶಇಂಡಿಯಾ ಮೈತ್ರಿಕೂಟಕ್ಕೆ 295ರಲ್ಲಿ ಗೆಲುವು: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಮೈತ್ರಿಕೂಟಕ್ಕೆ 295ರಲ್ಲಿ ಗೆಲುವು: ಮಲ್ಲಿಕಾರ್ಜುನ ಖರ್ಗೆ

2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 295 ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಲೋಕಸಭಾ ಚುನಾವಣೆಯ ಕೊನೆಯ ಹಾಗೂ 7ನೇ ಹಂತದ ಮತದಾನದ ವೇಳೆ ಇಂಡಿಯಾ ಮೈತ್ರಿಕೂಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟ 295 ಹಾಗೂ ಬಿಜೆಪಿ ನೇತೃತ್ವದ ಎನ್ ಡಿಎ 235 ಸ್ಥಾನಗಳಲ್ಲಿ ಗೆಲುವು ಪಡೆಯಲಿದ್ದು, ಇಂಡಿಯಾ ಮೈತ್ರಿಕೂಟ ಅಧಿಕಾರ ಹಿಡಿಯಲಿದೆ ಎಂದರು.

ಆಕ್ಸಿಸ್ ಇಂಡಿಯಾ ಸರ್ವೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ 295 ಸ್ಥಾನಗಳಲ್ಲಿ ಗೆಲುವು ಸಿಗಲಿದೆ ಎಂದು ಹೇಳಿದೆ. ಆದರೆ ಈ ವರದಿ ಬಹಿರಂಗವಾಗದಂತೆ ಎನ್ ಡಿಎ ತಡೆಯೊಡ್ಡಿದೆ. 7 ಹಂತದ ಮತದಾನದ ಪೂರ್ಣಗೊಂಡಿದ್ದು, ಇಂಡಿಯಾ ಮೈತ್ರಿಕೂಟಕ್ಕೆ ಜಯವಾಗಲಿದೆ ಎಂದು ತಿಳಿಸಿದರು.

ಕಾಂಗ್ರೆಸ್ ಈ ಬಾರಿ ಮೂರಂಕಿ ದಾಟಲಿದ್ದು, 128 ಸ್ಥಾನಗಳಲ್ಲಿ ಗೆಲ್ಲಲಿದೆ. ನಮಗೆ ಬಂದ ಬೂತ್ ಮಟ್ಟದ ಮಾಹಿತಿ ಪ್ರಕಾರ ಕಾಂಗ್ರೆಸ್ ಈ ಬಾರಿ ಉತ್ತಮ ಸಾಧನೆ ಮಾಡಲಿದೆ ಎಂದು ಖರ್ಗೆ ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments