Thursday, May 14, 2026
Google search engine
Homeಕಾನೂನುಹೈಕೋರ್ಟ್ ನಲ್ಲಿ ವಕೀಲರಾಗಿ ವಾದ ಮಂಡಿಸಿದ ಮಮತಾ ಬ್ಯಾನರ್ಜಿ

ಹೈಕೋರ್ಟ್ ನಲ್ಲಿ ವಕೀಲರಾಗಿ ವಾದ ಮಂಡಿಸಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮಾಜಿ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಇಂದು ಗುರುವಾರ ವಕೀಲರ ಕಪ್ಪು ಕೋಟ್ ಧರಿಸಿ ಮೊದಲ ಬಾರಿಗೆ ಹೈಕೋರ್ಟ್‌ಗೆ ಹಾಜರಾಗಿ ಗಮನ ಸೆಳೆದರು.

ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ಕುರಿತಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಪರವಾಗಿ ವಾದ ಮಂಡಿಸಲು ಅವರು ಖುದ್ದಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ನ್ಯಾಯಾಲಯದಲ್ಲಿ ವಾದ ಮಂಡಿಸಿದ ಮಮತಾ ಬ್ಯಾನರ್ಜಿ, “ನಾನು ಇಲ್ಲಿ ವಕೀಲೆಯಾಗಿ ಈ ಪ್ರಕರಣದಲ್ಲಿ ಹೋರಾಡುತ್ತಿದ್ದೇನೆ. ಹೈಕೋರ್ಟ್‌ನಲ್ಲಿ ಇದು ನನ್ನ ಮೊದಲ ಹಾಜರಾತಿಯಾಗಿದ್ದು, ಗೌರವಾನ್ವಿತ ನ್ಯಾಯಾಧೀಶರಿಗೆ ನನ್ನ ನಮನಗಳು” ಎಂದು ಮಾತು ಆರಂಭಿಸಿದರು.

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಟಿಎಂಸಿ ಕಾರ್ಯಕರ್ತರ ಮೇಲೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಅವರು ಆರೋಪಿಸಿ, ತಮ್ಮ ವಾದ ಮಂಡಿಸಿದರು.
ಪಶ್ಚಿಮ ಬಂಗಾಳವು ಬುಲ್ಡೋಜರ್ ರಾಜ್ಯವಲ್ಲ. ಇಲ್ಲಿ ಕಾನೂನಿನ ಆಡಳಿತವಿದೆ. ಮನೆ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸುತ್ತಿರುವುದು ಖಂಡನೀಯ. ಹಿಂಸಾಚಾರದಲ್ಲಿ ಮಕ್ಕಳು, ಮಹಿಳೆಯರು ಮತ್ತು ಅಲ್ಪಸಂಖ್ಯಾತರನ್ನೂ ಬಿಡುತ್ತಿಲ್ಲ. ಕೊಲೆಯಾದ 10 ಜನರ ಪಟ್ಟಿಯನ್ನು ನಾನು ನೀಡುತ್ತಿದ್ದೇನೆ, ಇದರಲ್ಲಿ ಆರು ಮಂದಿ ಹಿಂದೂಗಳಾಗಿದ್ದಾರೆ” ಎಂದು ಮಾಜಿ ಸಿಎಂ ಆದ ಅವರು ನ್ಯಾಯಪೀಠಕ್ಕೆ ತಿಳಿಸಿದರು.

ಪೊಲೀಸರ ವಿರುದ್ಧ ಕಿಡಿ:

ಹಿಂಸಾಚಾರ ನಡೆಯುತ್ತಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ ಅವರು, “ಪೊಲೀಸರು ಮಲಗಿದ್ದಾರೆಯೇ? ಅಪರಾಧ ನಡೆದ ಮೇಲೆ ತನಿಖೆ ಮಾಡುವುದು ಅವರ ಕರ್ತವ್ಯವಲ್ಲವೇ?” ಎಂದು ಪ್ರಶ್ನಿಸಿದರು.

92 ವರ್ಷದ ವಿಧವೆ ಸೇರಿದಂತೆ ಪರಿಶಿಷ್ಟ ಜಾತಿಯ ಕುಟುಂಬಗಳನ್ನು ಮನೆಯಿಂದ ಹೊರಹಾಕಲಾಗಿದೆ ಎಂದು ದೂರಿದ ಮಮತಾ, ಬಂಗಾಳದ ಜನರಿಗೆ ತಕ್ಷಣದ ರಕ್ಷಣೆ ನೀಡುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಮತ್ತು ನ್ಯಾಯಮೂರ್ತಿ ಪಾರ್ಥಸಾರಥಿ ಸೇನ್ ಅವರಿದ್ದ ಪೀಠಕ್ಕೆ ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments