ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕುತ್ತಿರುವ ಪ್ರಿಯಾಂಕಾ ಗಾಂಧಿ ಪರ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಲೋಕಸಭಾ ಚುನಾವಣೆಯ ಫಲಿತಾಂಶದಿಂದ ಇಂಡಿಯಾ ಮೈತ್ರಿಕೂಟ ಮತ್ತು ಟಿಎಂಸಿ ನಡುವಣ ಭಿನ್ನಾಭಿಪ್ರಾಯ ಸರಿ ಹೋದಂತೆ ಕಾಣುತ್ತಿದ್ದು, ಮಮತಾ ಬ್ಯಾನರ್ಜಿ ಕಾಂಗ್ರೆಸ್ ಪರ ಮೊದಲ ಬಾರಿ ರಾಜ್ಯದಿಂದ ಹೊರಗೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಮತಾ ಬ್ಯಾನರ್ಜಿ ಕಳೆದ ಡಿಸೆಂಬರ್ ನಲ್ಲಿ ನಡೆದ ಚುನಾವಣೆ ವೇಳೆ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಿದ್ದರು. ಆದರೆ ಕಾಂಗ್ರೆಸ್ ಈ ಪ್ರಸ್ತಾಪ ನಿರಾಕರಿಸಿತ್ತು. ಅಲ್ಲದೇ ಚುನಾವಣೆ ನಂತರ ರಾಹುಲ್ ಗಾಂಧಿ ವಾರಣಾಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ 3 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಿದ್ದರು ಎಂದು ಹೇಳಿಕೊಂಡಿದ್ದರು.