Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ಬೆಂಗಳೂರು

ಪೊಲೀಸರಿಂದ ಕಿರುಕುಳದಿಂದ ನೊಂದು ವಿಧಾನಸೌಧ ಮುಂದೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 18 ವೀಕ್ಷಣೆಗಳು

ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರ ಕಿರುಕುಳ ತಾಳಲಾರದೇ ವ್ಯಕ್ತಿಯೊಬ್ಬ ಬೆಂಗಳೂರಿನ ವಿಧಾನಸೌಧ ಮುಂಭಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಡಾ. ನಾಗೇಂದ್ರ ಎಂಬವರು ವಿಧಾನಸೌಧದ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ, ಅವರನ್ನು ಬೌರಿಂಗ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವೈದ್ಯರ ಪ್ರಕಾರ ಡಾ. ನಾಗೇಂದ್ರ ಅವರ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಹಸನ್ ಎಂಬಾತ ಅಕ್ರಮ ಬಾಂಗ್ಲಾ ವಲಸಿಗ ಎಂದು  ಆರೋಪಿಸಿ ಪುನೀತ್ ಕೆರೆಹಳ್ಳಿ  ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ನೀಡಿ ಠಾಣೆಯಿಂದ ಹೋಗುತ್ತಿದ್ದ ವೇಳೆ, ಬಾಗಲಗುಂಟೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು.

ಅಕ್ರಮ ಬಾಂಗ್ಲಾ ವಲಸಿಗರ ವಿವರಗಳನ್ನು ನಾಗೇಂದ್ರ ಮತ್ತು ಪುನೀತ್ ಕೆರೇಹಳ್ಳಿ ಪೊಲೀಸರಿಗೆ ನೀಡಿದ್ದರು. ಈ ಹಿನ್ನಲೆಯಲ್ಲಿ ದೂರು ನೀಡಿದವರ ವಿರುದ್ಧವೇ ಪ್ರಕರಣ ದಾಖಲಾಗಿತ್ತು.

ಸೂಲದೇವನಹಳ್ಳಿ ಪೊಲೀಸರಿಂದ ನಿರಂತರ ಕಿರುಕುಳ ಹಿನ್ನೆಲೆಯಲ್ಲಿ ನಾಗೇಂದ್ರ ನೊಂದು ಶನಿವಾರ ಬೆಳಿಗ್ಗೆ ವಿಧಾನಸೌಧ ಮುಂಭಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವಿಸುವುದನ್ನು ಗಮನಿಸಿದ ವಿಧಾನಸೌಧ ಪೊಲೀಸರು ತಕ್ಷಣ ವಿಷದ ಬಾಟಲಿಯನ್ನು ಕಿತ್ತುಕೊಂಡು, ಡಾ. ನಾಗೇಂದ್ರಪ್ಪ ಅವರನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆಗೆ ಮುಂದಾಗಿದ್ದ ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಮಾಹಿತಿ ಸಿಕ್ಕ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅಲ್ಲಿಗೆ ತೆರಳಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment