ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟಿ-20 ಟೂರ್ನಿ ಆರಂಭಗೊಳ್ಳಲಿದ್ದು, ಮಾರ್ಚ್ 8ರಂದು ಅಹಮದಾಬಾದ್ ಮೈದಾನದಲ್ಲಿ ಅಂತ್ಯಗೊಳ್ಳಲಿದೆ.
ಐಪಿಎಲ್ ಟಿ-20 2026ನೇ ಸಾಲಿನ ವೇಳಾಪಟ್ಟಿಯನ್ನು ಬಿಸಿಸಿಐ ಸೋಮವಾರ ಪ್ರಕಟಿಸಿದ್ದು, ಮಾರ್ಚ್ 8ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.
ಟಿ-20 ವಿಶ್ವಕಪ್ ಟೂರ್ನಿ ಮುಕ್ತಾಯಗೊಂಡ ಬೆನ್ನಲ್ಲೇ ಬಿಸಿಸಿಐ ಐಪಿಎಲ್ ಉದ್ಘಾಟನೆ ಮತ್ತು ಫೈನಲ್ ಪಂದ್ಯದ ಮಾಹಿತಿ ಮಾತ್ರ ಬಿಡುಗಡೆ ಮಾಡಿದ್ದು, ಪಂದ್ಯಗಳ ವೇಳಾಪಟ್ಟಿ, ಸ್ಥಳದ ವಿವರ ಬಿಡುಗಡೆ ಮಾಡಿಲ್ಲ.
ಕಳೆದ ವರ್ಷ ಐಪಿಎಲ್ ಟಿ-20 ಟೂರ್ನಿ ಗೆದ್ದ ಆರ್ ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನು ನಡೆಸಲು ನಿರ್ಬಂಧಿಸಲಾಗಿತ್ತು. ಈ ನಿರ್ಬಂಧ ತೆರವುಗೊಂಡರೂ ಆರ್ ಸಿಬಿ ಬೆಂಗಳೂರಿನಲ್ಲಿ ಹಿಂದೇಟು ಹಾಕುತ್ತಿತ್ತು.
ಇದೀಗ ರಾಜ್ಯ ಸರ್ಕಾರ ಐಪಿಎಲ್ ಪಂದ್ಯಗಳಿಗೆ ಅನುಮತಿ ನೀಡಿದ್ದೂ ಅಲ್ಲದೇ ಆರ್ ಸಿಬಿ 5 ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಲು ಸಮ್ಮತಿಸಿತ್ತು. ಈ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಮಸ್ಯೆ ಬಗೆಹರಿದ ಹಿನ್ನೆಲೆಯಲ್ಲಿ ಟೂರ್ನಿಯ ಉದ್ಘಾಟನಾ ಪಂದ್ಯ ಹಾಗೂ ಫೈನಲ್ ಪಂದ್ಯದ ವಿವರಗಳನ್ನು ಬಿಸಿಸಿಐ ಬಿಡುಗಡೆ ಮಾಡಿದೆ.



