Wednesday, June 24, 2026
Google search engine
Homeಅಪರಾಧಬೆಂಗಳೂರಿನ ಲಾಡ್ಜ್ ನಲ್ಲಿ ವಿವಾಹಿತ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರಿನ ಲಾಡ್ಜ್ ನಲ್ಲಿ ವಿವಾಹಿತ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ವಿವಾಹಿತರಾಗಿದ್ದ ಇಬ್ಬರು ಪ್ರೇಮಿಗಳು ಮದುವೆಗೆ ಕುಟುಂಬಗಳಿಂದ ಒಪ್ಪಿಗೆ ದೊರೆಯದ ಹಿನ್ನೆಲೆಯಲ್ಲಿ ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಯಲಹಂಕ ನ್ಯೂ ಟೌನ್‌ನ ಚಿಕನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವ ಈ ಲಾಡ್ಜ್‌ ನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗುರುವಾರ ಮಧ್ಯಾಹ್ನ ಲಾಡ್ಜ್ ಗೆ ಮರಳುವಾಗ ಇಬ್ಬರು ಪೆಟ್ರೋಲ್ ಹಿಡಿದುಕೊಂಡು ಬಂದಿದ್ದರು.  ಸ್ವಲ್ಪ ಸಮಯದ ನಂತರ ಕೋಣೆಯಿಂದ ಬೆಂಕಿ ಮತ್ತು ಪೆಟ್ರೋಲ್ ವಾಸನೆ ಬರಲು ಆರಂಭಿಸಿತು.

ಲಾಡ್ಜ್ ಸಿಬ್ಬಂದಿಯವರು ಕೋಣೆಯ ಬಾಗಿಲು ತೆರೆದು ನೋಡಿದಾಗ, ಇಬ್ಬರೂ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಕೂಡಲೇ ಲಾಡ್ಜ್ ಸಿಬ್ಬಂದಿ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ದೌಡಾದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಷ್ಟರಲ್ಲಿ ಇಬ್ಬರು ಬೆಂಕಿಯ ಕೆನ್ನಾಲಿಗೆ ಬಲಿಯಾಗಿದ್ದರು. ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವೈದ್ಯಕೀಯ ಕಾಲೇಜಿಗೆ ರವಾನೆ ಮಾಡಲಾಗಿದೆ.

ಸ್ಪಾ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಮತ್ತು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಪ್ರೀತಿಸುತ್ತಿದ್ದರು. ಇಬ್ಬರೂ ವಿವಾಹಿತರಾಗಿದ್ದು, ತಮ್ಮ ಕುಟುಂಬಗಳು ಪ್ರೀತಿಗೆ ಒಪ್ಪಿಕೊಳ್ಳದ ಕಾರಣ ಹತಾಶರಾಗಿದ್ದರು ಎಂದು ತಿಳಿದುಬಂದಿದೆ.

ಈ ಹತಾಶೆಯಿಂದಾಗಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಸಂಬಂಧ ಯಲಹಂಕ ನ್ಯೂ ಟೌನ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments